NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಿಬ್ಬಂದಿಗಳ ವೇತನ ಪರಿಷ್ಕರಣೆ ಜಾರಿ ವೇಳೆ ತಪ್ಪುಗಳಾಗಿದ್ದು ಸರಿಪಡಿಸಿ : ನಿರ್ದೇಶಕರ ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2020 ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಳವಾಗಿರುವ ಶೇ.15ರಷ್ಟು ವೇತನ ಹೆಚ್ಚಳ ಮಾಡುವ ವೇಳೆ ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ತಪ್ಪಾಗಿದ್ದು ಅದನ್ನು ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು, ಅಧಿಕಾರಿಗಳು 31.12.2019 ರಂದು ಪಡೆಯುತ್ತಿದ್ದ ಮೂಲವೇತನವನ್ನು ಶೇ.15 ರಷ್ಟು ಹೆಚ್ಚಿಸಿ, ಅದರಂತೆ ಮೂಲವೇತನ ಶ್ರೇಣಿಗಳನ್ನು ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಲಾಗಿದೆ.

ಆದರೆ, ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ಇರುವುದರಿಂದ ತಪ್ಪುಗಳಾಗಿದ್ದು, ಈ ತಪ್ಪುಗಳನ್ನು ಸರಿಪಡಿಸಿ ಪರಿಷ್ಕೃತ ವೇತನ ನೀಡುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮ ನೌಕರರು, ಅಧಿಕಾರಿಗಳಿಗೆ ಕಳೆದ 2023ರ ಮಾರ್ಚ್‌ 1ರಿಂದ ಮೂಲವೇತನ ಶೇ.15ರಷ್ಟು ಹೆಚ್ಚಿಸಿ ಜಾರಿಗೊಳಿಸಲಾಗಿದೆ.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಂತರಿಕ ಲೆಕ್ಕಪರಿಶೋಧನಾ ಇಲಾಖೆಯಿಂದ ಪರಿಶೀಲಿಸಿದಾಗ ಕೆಲವು ವಿಭಾಗಗಳ ವೇತನ ಪರಿಷ್ಕರಣೆಯಲ್ಲಿ ತಪ್ಪುಗಳು ಕಂಡುಬಂದಿವೆ ಎಂದು ತಿಳಿಸಿದ್ದಾರೆ.

ಇನ್ನು ಎಲ್ಲ ವಿಭಾಗಗಳಲ್ಲಿ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಮತ್ತೊಮ್ಮೆ ಈ ಬಗ್ಗೆ ಎಲ್ಲ ಸೇವಾ ಪುಸ್ತಕಗಳ ಪರಿಶೀಲನೆ ನಡೆಸಿ ಈ ರೀತಿಯ ವ್ಯತ್ಯಾಸಗಳಿದ್ದಲ್ಲಿ ಇದೇ ಮಾರ್ಚ್ 31 ರೊಳಗೆ ಸರಿಪಡಿಸಿಕೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ