NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಲಾ ಒಂದು ಕೋಟಿ ರೂಪಾಯಿ
ಪರಿಹಾರದ ಚೆಕ್‌ ವಿತರಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ KSRTC ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಚೆಕ್ಕ ವಿತರಿಲಸಾಯಿತು. ಇದರ ಜತೆಗೆ ನಿಗಮದ ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ಅಪಘಾತ ಹೊರತುಪಡಿಸಿ ವಿವಿಧ ಕಾಯಿಲೆಗಳಿಂದ ಮೃತಪಟ್ಟ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ. ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುವ ವೇಳೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಪ್ರಯಾಣಿಕರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳ ಚೆಕ್‌ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ ನಿಗಮವು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸಿದೆ. ಮೃತಪಟ್ಟವರ ಜೀವವು ಅಮೂಲ್ಯವಾಗಿದ್ದು, ಅದನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬದ ಆರ್ಥಿಕ ಭದ್ರತೆಗಾಗಿ ನಿಗಮವು ಒಂದು ಕೋಟಿ ರೂ. ವಿಮೆ ಯೋಜನೆ ದೂರದೃಷ್ಟಿಯನ್ನು ಹೊಂದಿದೆ ಎಂದು ತಿಳಿಸಿದರು.

ಇನ್ನು ಇಲ್ಲಿಯವರೆಗೆ ಅಪಘಾತದಲ್ಲಿ ಮೃತಪಟ್ಟ ನಿಗಮದ 17 ಮಂದಿಯ ಕುಟುಂಬಕ್ಕೆ ಈ ವಿಮೆ ತಲುಪಿದೆ. ಕುಟುಂಬದ ಸದಸ್ಯರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಮನೆ ನಿರ್ಮಾಣಕ್ಕೆ ಈ ಮೊತ್ತವನ್ನು ಬಳಸಿಕೊಳ್ಳಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು.

ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಗಮದ ನೌಕರರು, ಅಧಿಕಾರಿಗಳು ಮತ್ತು ನೌಕರರ ಮುಖಂಡರನ್ನು ಇದೇ ವೇಳೆ ಅಭಿನಂದಿಸಿ, ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸುವ ಆಧ್ಯತೆಯನ್ನು ಅನ್ವೇಷಿಸಲು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಸೂಚಿಸಿದರು.

ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ನಿಗಮದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಶ್ರಮಜೀವಿಗಳು. ಅವರಿಗೆ ಸಲ್ಲಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಈಗ ಪರಿಹಾರ ಮೊತ್ತ ಪಡೆದವರು ಅದನ್ನು ಸಮರ್ಪಕವಾಗಿ ಬಳಕೆಮಾಡಿಕೊಂಡು ಕುಟುಂಬವನ್ನು ಸ್ವಾವಲಂಬಿಯನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನು ಅಪಘಾತ ಹೊರತುಪಡಿಸಿ ಅನಾರೋಗ್ಯದಿಂದ ಮೃತಪಟ್ಟ 23 ಸಿಬ್ಬಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂ. ವಿತರಿಸಲಾಯಿತು. ಈ ಯೋಜನೆ ಜಾರಿಯಾದ ಮೇಲೆ ಒಟ್ಟು 39 ನೌಕರರಿಗೆ ಈ ವಿಮೆ ಪರಿಹಾರ ನೀಡಲಾಗಿದೆ. ನಿಗಮದ ಬಸ್‌ಗಳು ಅಪಘಾತಕ್ಕೀಡಾಗಿ ಮೃತಪಟ್ಟ ನಾಲ್ವರು ಪ್ರಯಾಣಿಕರ ಕುಟುಂಬಕ್ಕೆ ಅಪಘಾತ ಪರಿಹಾರ ವಿಮೆಯಡಿ ತಲಾ 10 ಲಕ್ಷ ರೂ. ನೀಡಲಾಗಿದೆ.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ನೌಕರರ ಸಂಘಟನೆಗಳ ಮುಖಂಡರಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ