NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ !

ಸಾರಿಗೆ ನೌಕರರ ಎರಡು ಬಣಗಳ ನಡುವಿನ ಕಿತ್ತಾಟದ ಲಾಭ ಪಡೆದುಕೊಂಡ ಸರ್ಕಾರ, ಸಾರಿಗೆ ನೌಕರರಿಗೆ ಅಲ್ಪ ವೇತನ ಹೆಚ್ಚಳ ಮಾಡಿರುವುದು ಬಹುತೇಕ ಖಚಿತವಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆಯಾಗಿದ್ದು ಶೇ.12ರಿಂದ 15ರ ನಡುವೆ ಹೆಚ್ಚಳವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದ್ದು ಇಂದು 9 ಗಂಟೆಯೊಳಗೆ ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ನಾಲ್ಕೂ ನಿಗಮಗಳ ನೌಕರರ ವೇತನ ನಿಯಮಿತವಾಗಿ ಪರಿಷ್ಕರಣೆಯಾಗುತ್ತಿತ್ತು. ಆದರೆ, 2020ರಲ್ಲಿ ಬಂದ ಕೊರೊನಾದಿಂದಾಗಿ ಅಂದಿನ ಬಿಜೆಪಿ ಸರ್ಕಾರ 2020ರ ಜನವರಿ 1 ಮಾಡಬೇಕಿದ್ದ ನೌಕರರ ವೇತನ ಪರಿಷ್ಕರಣೆಗೆಯನ್ನು 2023ರ ಮಾರ್ಚ್‌ ವೇತನಕ್ಕೆ ಶೇ.15ರಷ್ಟು ವೇತನ ಸೇರಿಸಿ ಕೊಟ್ಟಿತ್ತು.

ಇಂದು ಸರ್ಕಾರ ಶೇ.12ರಿಂದ 15ರ ನಡುವೆ ವೇತನ ಹೆಚ್ಚಳ ಮಾಡಿದ್ದು ಘೋಷಣೆ ಮಾಡುವುದೊಂದೆ ಬಾಕಿ ಇದೆ ಎಂದು ತಿಳಿದು ಬಂದಿದೆ. ಅಲ್ಲದೆ ಇದು 2024ರ ಜನವರಿ 1ರಿಂದ ಅನ್ವಯವಾಗುವುದಿಲ್ಲ. ಬದಲಿಗೆ ಈ ಹಿಂದೆ ಸರ್ಕಾರ ಏನು ಹೇಳಿತ್ತೋ ಅದೇ ರೀತಿ ಆಗಲಿದೆ ಎಂದು ತಿಳಿದು ಬಂದಿದೆ.

ನೌಕರರ ಬೇಡಿಕೆ ಏನು?: ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ಹೆಚ್ಚಳ, ಕನಿಷ್ಠ ವೇತನದ ಪರಿಷ್ಕರಣೆ ಮತ್ತು ಬಾಕಿ ವೇತನ (Arrears) ಪಾವತಿಗೆ ಆಗ್ರಹಿಸುತ್ತಿದ್ದಾರೆ. ಅಲ್ಲದೇ ನೌಕರರು 7ನೇ ವೇತನ ಆಯೋಗದ ಮಾದರಿಯಲ್ಲಿ ಕನಿಷ್ಠ ವೇತನ ರೂ. 36,000ಕ್ಕೆ ಏರಿಕೆ ಮಾಡಲು ಒತ್ತಾಯಿಸುತ್ತಿದ್ದರು. ಇನ್ನು ಜಂಟಿ ಕ್ರಿಯಾ ಸಮಿತಿ ಶೇ.25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸುತ್ತಿತ್ತು.

ಆದರೆ, ಇದೆಲ್ಲವನ್ನು ಬಿಟ್ಟು ಇಂದು ಸರ್ಕಾರ ಏಕಪಕ್ಷೀಯವಾಗಿ ಶೇ.12ರಿಂದ 15ರ ನಡುವೆ ವೇತನ ಹೆಚ್ಚಳ ಮಾಡಿದೆ ಎಂದು ಹೇಳಲಾಗುತ್ತಿದ್ದು ಅಧಿಕೃತ ಆದೇಶವಷ್ಟೇ ಹೊರಬೀಳಬೇಕಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ  ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಡಿಐಜಿ ಅನುಚೇತ್ ಅಧಿಕಾರ ಸ್ವೀಕಾರ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮೆ ಮಾಡಿಸಲು ಅನ್ನದಾತರಿಗೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಕರೆ ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ KSRTC- BMTC ನೂತನ ಎಂಡಿಗಳ ಭೇಟಿ ಮಾಡಿದ ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆಗೆ ಸಭೆ ಕರೆಯಲು ಒತ್ತಾಯ ​NWKRTC ಸಂಸ್ಥೆಗೆ ಪ್ರಾಮಾಣಿಕ ಸೇವೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ದರ್ಜೆ-2ರ ಅಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಕರೆ BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು