NEWSನಮ್ಮರಾಜ್ಯ

KSRTC ನೌಕರರ ಸಂಘ ಹಮ್ಮಿಕೊಂಡಿದ್ದ ಬೃಹತ್‌ ಧರಣಿ ಸತ್ಯಾಗ್ರಹ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜ.30ರಿಂದ ಅಂದರೆ ನಾಳೆಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಜಗದೀಶ್‌ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘವು ಎಲ್ಲ ನೌಕರರ ಸಂಘಟನೆಗಳ ಜತೆಗೂಡಿ ನಾಳೆಯಿಂದ ಅನಿರ್ದಿಷ್ಟಾವಧಿ ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾಗಿ ಕಳೆದ ವಾರವೇ ಘೋಷಿಸಿತ್ತು.

ಆದರೆ ಫ್ರೀಡಂಪಾರ್ಕ್‌ನಲ್ಲಿ ವಿವಿಧ ಇಲಾಖೆಗಳ ಬೇರೆಬೇರೆ ನೌಕರರು ಪ್ರತಿಭಟನಾ ಧರಣಿ ನಡೆಸುತ್ತಿರುವುದರಿಂದ ಸ್ಥಳವಕಾಶದ ಲಭ್ಯತೆ ಇಲ್ಲದ ಕಾರಣ ಜ.30ರ ಬದಲಿಗೆ ಫೆ.6ರಿಂದ ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರ ನೇತೃತ್ವದಲ್ಲಿ ಈ ಧರಣಿ ಸತ್ಯಾಗ್ರಹ ಆಯೋಜಿಸಲಾಗುತ್ತಿದೆ  ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಇಟ್ಟುಕೊಂಡು ಮಾಡುತ್ತಿರುವ ಈ ಧರಣಿ ಸತ್ಯಾಗ್ರಹದಲ್ಲಿ ಸಾರಿಗೆ ನೌಕರರ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಸರ್ಕಾರವನ್ನು ಎಚ್ಚರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ