NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತೀವ್ರ ನಗದು ಕೊರತೆ ಎದುರಾಗಿದೆ – ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸ್ತುತ ಸಾರಿಗೆ ಸಂಸ್ಥೆಗಳಲ್ಲಿ ಇಂಧನ ವೆಚ್ಚ ಹಾಗೂ ಕಾಲಿಕವಾಗಿ ಹೆಚ್ಚಳವಾಗುತ್ತಿರುವ ತುಟ್ಟಿಭತ್ಯೆ ಹಾಗೂ ಇತರೆ ಕಾರ್ಯಾಚರಣೆ ವೆಚ್ಚದಲ್ಲಿ ಏರಿಕೆ ಉಂಟಾಗಿರುವುದರಿಂದ ತೀವ್ರ ನಗದು ಕೊರತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಕುರಿತು ಶಿಫಾರಸ್ಸು ಮಾಡಲು ರಚಿಸಲಾಗಿರುವ ಏಕ ಸದಸ್ಯ ಸಮಿತಿಯು ಸಲ್ಲಿಸಿರುವ ವರದಿಯು ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಉದ್ಯೋಗಿಗಳಿಗೆ 1-3-2020ರಿಂದ ವೇತನ ಪರಿಷ್ಕರಣೆಯ ಬಾಕಿ ಇರುವ 38 ತಿಂಗಳ ಹಿಂಬಾಕಿ ವೇತನವನ್ನು ಪಾವತಿಸದೇ ಇರಲು ಕಾರಣವೇನು; ಯಾವ ಕಾರಣಕ್ಕಾಗಿ ವಿಳಂಬವಾಗುತ್ತಿದೆ; ಹಿಂಬಾಕಿ ಪಾವತಿಯನ್ನು ಯಾವಾಗ ಮಾಡಲಾಗುವುದು ಎಂದು ಇದೇ ಬಜೆಟ್‌ ಅಧಿವೇಶನದಲ್ಲಿ ಫೆ.19ರ ಸೋಮವಾರ ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 1090ಕ್ಕೆ ಈ ಉತ್ತರವನ್ನ ಸಾರಿಗೆ ಸಚಿವರು ಕೊಟ್ಟಿದ್ದಾರೆ.

ಇನ್ನು ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಂದಿಕಾರಿ/ ನೌಕರರಿಗೆ 31-12-2019ರಂದು ಪಡೆಯುತ್ತಿದ್ದ ಮೂಲ ವೃತನವನ್ನು ಶೇ.15ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿಗಳುನ್ನು ಪರಿಷ್ಕರಿಸಿ 1-3-2023ರಿಂದ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಆದರೆ, ಸಾರಿಗೆ ಸಚಿವರು ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕೇಳಿದ ಪ್ರಶ್ನೆಗೆ ನೇರವಾಗಿ ಸಮರ್ಪಕವಾದ ಉತ್ತರವನ್ನೇ ನೀಡಿಲ್ಲ. ಬದಲಿಗೆ ಸಂಸ್ಥೆಗಳು ತೀವ್ರ ನಗದು ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಕುರಿತು ಶಿಫಾರಸ್ಸು ಮಾಡಲು ರಚಿಸಲಾಗಿರುವ ಏಕ ಸದಸ್ಯ ಸಮಿತಿಯು ಸಲ್ಲಿಸಿರುವ ವರದಿಯು ಪರಿಶೀಲನೆಯಲ್ಲಿದೆ ಎಂದಷ್ಟೆ ಉತ್ತರ ಕೊಟ್ಟಿದ್ದಾರೆ.

ಅಂದರೆ, ಈ ಬಗ್ಗೆ ಇನ್ನು ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿಲ್ಲ ಎಂಬುದನ್ನು ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದು, ಅಮಾಯಕ ಸಾರಿಗೆ ನೌಕರರು ನಾವು ಏನು ಮಾಡಿದರೂ ಸಹಿಸಿಕೊಳ್ಳುತ್ತಾರೆ ಎಂಬ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ನಡೆದುಕೊಳ್ಳುತ್ತಿದ್ದಾರೆ ಎಂಬುವುದು ಇಲ್ಲಿ ಸ್ಪಷ್ಟವಾದಂತೆ ಕಾಣುತ್ತಿದೆ.

ಇನ್ನು ಈ ರೀತಿಯ ಸರ್ಕಾರ ನಡೆಯನ್ನು ಸಮರ್ಥವಾಗಿ ವಿರೋಧಿಸಿ ಸಾರಿಗೆ ನಿಗಮಗಳ ಅಧಿಕಾರಿಗಳು/ ನೌಕರರಿಗೆ ನ್ಯಾಯಯುತವಾಗಿ ಸಲ್ಲಬೇಕಿರುವುದನ್ನು ಕೊಡಿಸಿಕೊಡುವಲ್ಲಿ ನೌಕರರ ಪರ ಎಂದು ಹೇಳಿಕೊಳ್ಳುತ್ತಿರುವ ಸಂಘಟನೆಗಳ ಮುಖಂಡರು ಇಲ್ಲಿ ಹಲ್ಲುಕಿತ್ತ ಹಾವಿನಂತಾಗಿರುವುದು ಬೇಸರ ತರಿಸಿದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸರ್ಕಾರ ಇತಿಹಾಸದಲ್ಲೇ ಸಾರಿಗೆ ನಿಗಮಗಳ ನೌಕರರಿಗೆ ಈರೀತಿ ವೇತನ ಹಿಂಬಾಕಿ ಉಳಿಸಿಕೊಂಡ ನಿದರ್ಶನವಿಲ್ಲ. ಆದರೆ ಈಗ ಅದನ್ನು ಸಾಬೀತು ಮಾಡಲು ಹೊರಟಂತೆ ಕಾಣುತ್ತಿದೆ. ಇದಕ್ಕೆ ನಿವೃತ್ತ ನೌಕರರು ಈಗಾಗಲೇ ಕೇಂದ್ರ ಕಾರ್ಮಿಕ ಸಚಿವರಿಗೆ ಸಂಬಂಧ ಪಟ್ಟ ರಾಜ್ಯ ಸರ್ಕಾರಕ್ಕೂ ಹಲವು ಬಾರಿ ಮನವಿ ಮಾಡಿದ್ದು ಈ ನಿಮ್ಮ ಧೋರಣೆಯನ್ನು ಬಿಟ್ಟು ನಮಗೆ ಕೊಡಬೇಕಿರುವುದು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ