NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮತ್ತೊಂದು ಮೈಲಿಗಲ್ಲು ಸಾಧಿಸಿದ ಶಕ್ತಿ ಯೋಜನೆ- ಸಿಎಂ ಶ್ಲಾಘನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ‌ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ 504 ಕೋಟಿ‌ ಮಹಿಳೆಯರ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ.

ಈ ಹಿನ್ನೆಲೆ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕೂ ನಿಗಮಗಳ ಅಧಿಕಾರಿ, ಸಿಬ್ಬಂದಿ, ನೌಕರರ ಸಂಘಟನೆಗಳ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records-World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್‌ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಇನ್ನು ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ ಎಂದು ಸಿಎಂ ಹೆಮ್ಮೆಯಿಂದ ತಿಳಿಸಿದ್ದಾರೆ.

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ