NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಯಾಣಿಕರಿಗೆ ಶಾಕ್‌ಕೊಟ್ಟ KSRTC: ಬಸ್‌ ಲಗೇಜ್‌ ದರ ಹೆಚ್ಚಳ- ನಾಳೆಯಿಂದಲೇ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ಗಳ ದರ ಪರಿಷ್ಕರಿಸಿದ್ದು ಇದೇ ಫೆ.16ರಿಂದ ಈ ಹೊಸ ದರ ಜಾರಿಗೆ ಬರಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ತಿಳಿಸಿದ್ದಾರೆ.

KSRTC ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಹೊರತಾಗಿ ಪ್ರಯಾಣಿಕ ಸಹಿತ ಹಾಗೂ ಪ್ರಯಾಣಿಕ ರಹಿತ ಲಗೇಜ್‌ಗಳನ್ನು ಸಾಗಿಸಲು ಅವಕಾಶವಿದ್ದು, ಈ ಲಗೇಜ್‌ಗಳಿಗೆ ವಿಧಿಸಬೇಕಾದ ಟಿಕೆಟ್ ದರಗಳನ್ನು ಪರಿಷ್ಕರಿಸಿ ಗುರುವಾರ ಎಂಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಡೀಸೆಲ್, ಸಿಬ್ಬಂದಿ ಹಾಗೂ ಇತರೆ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ ನಿಗಮದ ಬಸ್ಸುಗಳಲ್ಲಿ ಸಾಗಿಸುವ ಲಗೇಜ್ ದರಗಳನ್ನು ಪರಿಷ್ಕರಿಸಲಾಗಿದೆ. ಪರಿಷ್ಕೃತ ದರ ಇದೇ ಫೆ.16ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಪರಿಷ್ಕೃತ ದರಗಳು 16-02-2026 ರಿಂದ ಜಾರಿಗೆ ಬರಲಿದ್ದು, ಪರಿಷ್ಕೃತ ದರಗಳನ್ನು ಇಟಿಎಂ ತಂತ್ರಾಂಶದಲ್ಲಿ ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶ ಮಾಡಿದ್ದಾರೆ.

ಉಳಿದಂತೆ ಈ ಸಾಮಾನ್ಯ ಸ್ಥಾಯಿ ಆದೇಶಗಳ ಇತರೆ ಅಂಶಗಳಲ್ಲಿ ಯಾವುದೇ ಬದಲಾವಣೆ ಇಲ್ಲ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...