- ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು
- ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಇಂದು (14ರಂದು) ನಡೆಬೇಕಿದ್ದ ನೌಕರರ ಸಂಘಟನೆಗಳ ಜತೆಗೆ ಸಿಎಂ ಸಭೆಯನ್ನು ಕೆಲ ಕಾರಣಗಳಿಂದ ಮಾಡಲಾಗಲಿಲ್ಲ. ಆದರೆ ಶೀಘ್ರದಲ್ಲೇ ಸಭೆ ಕರೆಯಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅತೀ ಶೀಘ್ರದಲ್ಲೇ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗುವುದು ಹೀಗಾಗಿ ಸಭೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳನ್ನು ಕರೆಯಲಾಗುವುದು. ಯಾವುದೇ ನೌಕರರು ಗಾಬರಿ ಪಡುವುದು ಬೇಡ ಎಂದು ತಮ್ಮನ್ನು ಭೇಟಿ ಮಾಡಿದ ಒಕ್ಕೂಟದ ಪದಾಧಿಕಾರಿಗಳಿಗೆ ತಿಳಿಸಿದ್ದಾರೆ.
ಆದರೆ, ಈ ಎಲ್ಲವನ್ನು ಗಮನಿಸಿದರೆ ಸಿಎಂ ಪದೇಪದೆ ಸಾರಿಗೆ ನೌಕರರ ವೇತನ ಸಂಬಂಧ ಸಭೆ ಕರೆಯುವುದಾಗಿ ಹೇಳಿ ಮತ್ತೆ ಅದನ್ನು ಯಾವುದೇ ಸಕಾರಣವಿಲ್ಲದೆ ಕೈಬಿಡುವ ಕೆಲಸ ಮಾಡುತ್ತಿದ್ದಾರೆ. ಇದು ಒಂದು ರೀತಿ ಮಕ್ಕಳಾಟದಂತೆ ಸಿಎಂ ಸಾರಿಗೆ ನೌಕರರ ವಿಷಯದಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಸಾರಿಗೆ ಸಚಿವರು ಸಭೆ ಕರೆಯುತ್ತೇವೆ ಎಂದು ನಮ್ಮ ಬಳಿ ಹೇಳುತ್ತಾರೆ. ಆದರೆ ಸಿಎಂ ಸಭೆಯನ್ನು ಹೇಳದೆ ಕೇಳದೆ ಕೈಬಿಡುತ್ತಾರೆ. ಅಂದರೆ ಸಿಎಂ ಮತ್ತು ಸಾರಿಗೆ ಸಚಿವರ ನಡುವೆ ಹೊಂದಾಳಿಕೆ ಕೊರತೆ ಇದೆಯೇ ಎಂದು ಅನಿಸುತ್ತಿದೆ. ಕಾರಣ ಸಚಿವರು ಸಿಎಂ ಸಭೆ ನಡೆಸುತ್ತಾರೆ ಎಂದು ದಿನಾಂಕವನ್ನು ಹೇಳಿರುತ್ತಾರೆ. ಆದರೆ ಅತ್ತ ಸಿಎಂ ಅದನ್ನು ಡಸ್ಟ್ಬಿನ್ಗೆ ಹಾಕುತ್ತಾರೆ.
ಅಂದರೆ ಇಲ್ಲಿ ನಾವು ದುಡಿಯುವ ವರ್ಗದ ಪರ ಇದ್ದೇವೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಸಿಎಂ ಈ ಜಬಾಬ್ದಾರಿಯನ್ನೇ ಮರೆಯುತ್ತಿದ್ದಾರೆ ಏಕೆ? ಇದರಿಂದ ಸಾರಿಗೆ ನೌಕರರಿಗೆ ಕಳೆದ 2020 ಜನವರಿ ಒಂದರಿಂದ ಅನ್ವಯವಾಗುವಂತೆ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿನ್ನು ಈವರೆಗೂ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1 ರಿಂದ ಆಗಬೇಕಿರುವ ವೇತನ ಹೆಚ್ಚಳದ ಬಗ್ಗೆಯೂ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ.
ಇದನ್ನು ನೋಡಿದರೆ ಸಿಎಂ ಸಾರಿಗೆಯ ನಾಲ್ಕೂ ನಿಗಮಗಳ ಬಗ್ಗೆ ತಾರತಮ್ಯತೆ ಅನುಸರಿಸುತ್ತಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಅನಿಸುತ್ತಿದೆ. ಅಲ್ಲದೆ ಈ ಸಾರಿಗೆ ನೌಕರರ ಒಕ್ಕೂಟ ಮತ್ತು ಜಂಟಿ ಕ್ರಿಯಾ ಸಮಿತಿಯ ನಿಲುವುಗಳು ವಿರುದ್ಧ ದಿಕ್ಕಿನಲ್ಲಿರುವುದರಿಂದ ಸಿಎಂ ಸಿದ್ದರಾಮಯ್ಯ ನೌಕರರ ವೇತನ ಸಂಬಂಧ ದೃಢ ನಿರ್ಧಾರಕ್ಕೆ ಬರದೆ ಸುಖಸುಮ್ಮನೆ ಕಾಲ ದೂಡಿಕೊಂಡೆ ಬರುತ್ತಿದ್ದಾರೆ.
ಇದು ಹೀಗೆಯೇ ಮುಂದುವರಿದರೆ ಮತ್ತೆ 2021ರ ಮುಷ್ಕರವನ್ನು ಕಾಂಗ್ರೆಸ್ ಸರ್ಕಾರ ಕೂಡ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಹಿಂದಿನಿಂದಲೂ ಸಾರಿಗೆ ನೌಕರರು ಕೊಡುತ್ತಲೇ ಬರುತ್ತಿದ್ದಾರೆ. ಅದು ಆಗುವಂತೆ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದುಕೊಳ್ಳುತ್ತಾರೋ ಇಲ್ಲ ತಾವು ಪ್ರಣಾಳಿಕೆಯಲ್ಲಿ ನೀಡಿರುವಂತೆ ಸರಿ ಸಮಾನ ವೇತನ ಮಾಡಿ ಸಿಎಂ ತಮ್ಮ ಮತ್ತು ಸರ್ಕಾರ ಮಾನ ಉಳಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...