NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಾನಂದೂರು – ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಬಾನಂದೂರಿನಲ್ಲಿ ಚಾಲನೆ ನೀಡಿದರು.

ಶುಕ್ರವಾರ ಜೂನ್‌14ರಂದು ಬಾನಂದೂರು ಗ್ರಾಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಬರುತ್ತಿದ್ದಂತೆ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಲಿಂಗಪ್ಪ ಅವರು ಆದಿಚುಂಚನಗಿರಿಗೆ 127 ರೂ. ಕೊಟ್ಟು ಮೊದಲ ಟಿಕೆಟ್ ಪಡೆದು ಪ್ರಯಾಣ ಬೆಳೆಸಿ ಶುಭ ಹಾರೈಸಿದರು.

ಈ ವೇಳೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮಾತನಾಡಿ, ಆದಿಚುಂಚನಗಿರಿಯನ್ನು ಚಿನ್ನದ ಗಿರಿಯಾಗಿ ಅಭಿವೃದ್ಧಿ ಮಾಡಿದ ಈ ಮಣ್ಣಿನಲ್ಲಿ ಜನಿಸಿದ ಪುಣ್ಯಪುರಷ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಗ್ರಾಮದಿಂದ ಚುಂಚನಗಿರಿಗೆ ನೇರ ಬಸ್ ಸಂಚಾರ ಆರಂಭಿಸುವ ಮೂಲಕ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈ ಭಾಗದ ಜನರ ಬಹುದಿನದ ಕನಸ್ಸು ನನಸು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಈ ಭಾಗದ ಜನರು ಬೆಂಗಳೂರು ಅಥವಾ ಮಂಡ್ಯ ಮತ್ತಿತರ ಸ್ಥಳಗಳಿಂದ ಸುತ್ತಾಡಿ ಶ್ರೀಕ್ಷೇತ್ರಕ್ಕೆ ತೆರಳಬೇಕಾಗಿತ್ತು, ಆದರೆ ಗ್ರಾಮದ ಗಂಗಾಧರಯ್ಯ ಅವರ ಪರಿಶ್ರಮದಿಂದ ನೇರ ಬಸ್ ಸೌಲಭ್ಯ ಸಿಕ್ಕಿದೆ. ಈ ಬಸ್ ಶಾಶ್ವತವಾಗಿ ಉಳಿಯಬೇಕು, ಭಕ್ತರು ಮತ್ತು ಪ್ರಯಾಣಿಕರು ಚೀಟಿ ಪಡೆದು ಪ್ರಯಾಣಿಸಿ ಬಸ್‌ ಸೇವೆಯ ಸದುಪಯೋಗ ಪಡಿಸಿಕೊಳ್ಳಿ ಎಂದು ಆಶಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ ಬಾನಂದೂರು ಗ್ರಾಮದಲ್ಲಿ ಜನಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರು ಈ ಜಗತ್ತು ಕಂಡ ಮಹಾ ಪುರುಷರು. ಅವರ ಹುಟ್ಟೂರಿನಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ನೇರ ಬಸ್ ಸೌಲಭ್ಯ, ಈ ಭಾಗದ ಜನರಿಗೆ ಅನುಕೂಲವಾಗಿದೆ. ಈ ಭಾಗದ ಬಹುದಿನದ ಸಮಸ್ಯೆ ಇದೀಗ ಬಗೆಹರಿದಿದ್ದು, ಜನರು ಹೆಚ್ಚುಹೆಚ್ಚಾಗಿ ಪ್ರಯಾಣ ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕೆಎಸ್‌ಆರ್‌ಟಿಸಿ ರಾಮನಗರ ವಿಭಾಗದ ಡಿಟಿಒ  ಶ್ರೀನಿವಾಸಮೂರ್ತಿ, ಬಸ್ ಚಾಲಕ ಮಂಜುನಾಥ್, ನಿರ್ವಾಹಕ ವೆಂಕಟೇಶ್ ಅವರನ್ನು ಗ್ರಾಮಸ್ಥರ ಪರವಾಗಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಬಸ್‌ಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಿಡದಿ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಬಿಜಿಎಸ್ ಪ್ರಗತಿಪರ ವೇದಿಕೆಯ ಪದಾಧಿಕಾರಿಗಳಾದ ಗಂಗಾಧರಯ್ಯ, ಬಿ.ಎಂ.ಕುಮಾರ್, ನಂಜುಂಡಿ, ರೇಣುಕಯ್ಯ, ಕೇಶವಮೂರ್ತಿ, ಭಾನುಪ್ರಕಾಶ್, ಶಿವಣ್ಣ, ಸಂತೋಷ್, ಗಂಗಾಧರ್, ಕುಮಾರ್, ಜಯಕುಮಾರ್, ಬಿ.ಕೆ.ವಿಠ್ಠಲ್, ಜಾನಪದ ಗಾಯಕಿ ಬೋರಮ್ಮ ಸೇರಿದಂತೆ ಹಲವರು ಇದ್ದರು.

Leave a Reply

error: Content is protected !!
LATEST
ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸಾರಿಗೆ ನೌಕರರಿಗೆ ನಿರಾಸೆ KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ