Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಮತ್ತೆ ಸಾರಿಗೆ ನೌಕರರ ಮುಷ್ಕರ: ಸರ್ಕಾರ, ನಿಗಮಗಳ ಆಡಳಿತ ಮಂಡಳಿಗೆ ಎಚ್ಚರಿಕೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮತ್ತೆ ಸಾರಿಗೆ ನೌಕರರು ಮುಷ್ಕರ ಮಾಡುವ ಎಚ್ಚರಿಕೆಯನ್ನು ಇಂದು ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳ ಆಡಳಿತ ಮಂಡಳಿಗೆ ನೀಡಿದ್ದಾರೆ.

ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ “ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ” ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೂಟದ ಅಧ್ಯಕ್ಷ ಚಂದ್ರಶೇಖರ್‌, ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ, ನಮ್ಮ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಡುವಂತೆ ನೂರಾರು ಮನವಿ ಪತ್ರಗಳನ್ನು ಮುಖ್ಯ ಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ ಆದರೂ ಮುಖ್ಯವಾಗಿ ಆಗಬೇಕಿರುವುದೇ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕಳೆದ ಒಂದೂವರೆ ವರ್ಷದಿಂದಲೂ ಅನೇಕ ಶಾಂತಿಯುತ ಹೋರಾಟಗಳನ್ನು ಮಾಡಿದರು ನಮ್ಮ ಬೇಡಿಕೆಗಳು ಪೂರ್ಣ ಪ್ರಮಾಣದಲ್ಲಿ ಇಡೇರಿಸಿಲ್ಲ. ಆದ್ದರಿಂದ ಮೊದಲಿಗೆ ಸಾರ್ವಜನಿಕರ ಹಾಗೂ ಸರ್ಕಾರದ ಗಮನ ಸೆಳೆಯಲು ಭೀತಿಪತ್ರಗಳನ್ನು ಹಂಚುದ ಚಳವಳಿ ಹಮ್ಮಿಕೊಳ್ಳಲಾಗುವುದು, ತದನಂತರವು ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲಿಲ್ಲವೆಂದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಾರಿಗೆ ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳಲ್ಲಿ ಮಾಡಲಾಗಿದ್ದ ಪಜಾ, ವರ್ಗಾವಣೆ ಮತ್ತು ಆಮಾನತು ಪ್ರಕರಣಗಳ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸದ ಕಾರಣ ಮುಖ್ಯವಾಗಿ ಬಿಎಂಟಿಸಿ ಸಂಸ್ಥೆಯಲ್ಲಿ ವಜಾ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಆಡಳಿತ ಮಂಡಳಿಯ ಕೆಲವು ಅಧಿಕಾರಿಗಳು ಮನಸೋಇಚ್ಚೆ ನೌಕರರ ಮೇಲೆ ದ್ವೇಷ ಸಾಧಿಸುತ್ತಿದ್ದು ಸರ್ಕಾರದ ಮಾತನ್ನು ಪಾಲಿಸದೆ ಮತ್ತು ನ್ಯಾಯಾಲಯದ ಆದೇಶಗಳ ವಿರುದ್ಧ ತಡೆಯಾಜ್ಞೆಗಳನ್ನು ತರುವ ಮೂಲಕ ಕಾಲ ವಿಳಂಬ ಮಾಡುತ್ತಿದ್ದಾರೆ.

ಇನ್ನು ಘಟಕಗಳಲ್ಲಿ ಪ್ರತಿ ಹಂತದಲ್ಲೂ ವ್ಯಾಪಕ ಭ್ರಷ್ಟಚಾರ ನಡೆಯುತ್ತಿದ್ದು ಫೋನ್ ಪೇ, ಗೂಗಲ್ ಪ್ಲೇ ಹಾಗೂ ಏಜೆಂಟ್ ಸಂಸ್ಕೃತಿ ಹೆಮ್ಮರವಾಗಿ ಬೆಳೆದು ನೌಕರರು ದಿನಂಪ್ರತಿ ನಾನಾ ರೀತಿಯ ಮಾನಸಿಕ ಕಿರುಕುಳಗಳನ್ನು ಅನುಭವಿಸುತ್ತ ಕರ್ತವ್ಯ ನಿರ್ವಹಿಸಬೇಕಾದ ವಾತಾವರಣ ಸಂಸ್ಥೆಯಲ್ಲಿ ಉದ್ಭವವಾಗಿದೆ. ನೊಂದ ಕೆಲವು ಸಾರಿಗೆ ನೌಕರರು ಕಿರುಕುಳ ತಡೆಯಲಾರದೆ ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದಾರೆ ಎಂದು ಆರೋಪಿಸಿದರು.

ಎಲ್ಲ ಸಾರಿಗೆ ನೌಕರರ ಸಮಸ್ಯೆಗಳ ನಿವಾರಣೆಗಳಿಗೆ ಹಾಗೂ ಸರ್ಕಾರ ನೀಡಿರುವ ಲಿಖಿತ ಭರವಸೆಗಳನ್ನು ಈ ಕೂಡಲೆ ಈಡೇರಿಸುವಂತೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಹೋರಾಟಗಳನ್ನು ಹಮ್ಮಿಕೊಳ್ಳಲು ಸಾರಿಗೆ ಸಂಸ್ಥೆಯಲ್ಲಿ ನೋಂದಾಯಿಸಲ್ಪಟ್ಟಿರುವ ಹಲವು ಸಂಘಗಳು “ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ” ಯ ಹೆಸರಿನಡಿಯಲ್ಲಿ ಒಟ್ಟುಗೂಡಲಾಗಿದೆ. ಈ ಕೂಡಲೆ ಕಳಕಂಡ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಹಾಗೂ ಭರವಸೆಗಳನ್ನು ಈಡೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

1) ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ, ಇತರ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆದು   06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನಾಲ್ಕು ನಿಗಮಗಳಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಂಡು ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವುದು. (ವೇತನ ತಾರತಮ್ಯ ಅಂಕಿ ಆ೦ಶಗಳನ್ನು ಮತ್ತು ಸರ್ಕಾರ ನೀಡಿರುವ ಲಿಖಿತ ಭರವಸೆ ಪಟ್ಟಿಯನ್ನು ಲಗತ್ತಿಸಲಾಗಿದೆ).

3) 1992 ರ ನಂತರ, ಇಲ್ಲಿಯವರೆಗೂ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿಲ್ಲ. ಆದ್ದರಿಂದ ಈ ಕೂಡಲೆ ಕಡ್ಡಾಯವಾಗಿ ಸಾರಿಗೆ ನಿಗಮಗಳಲ್ಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು.

4) ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುದ ಯೋಜನೆಯನ್ನು ಈ ಕೂಡಲೆ ಕೈ ಬಿಡುವುದು.

5) ಸಾರಿಗೆ ಸಂಸ್ಥೆಯ ಎಲ್ಲ ನೌಕರರಿಗೂ ದಿನಾಂಕ: 10/04/2002 ರ ಪೂರ್ವದಲ್ಲಿ ಉಪದಾನ ಪಾವತಿಸುತ್ತಿದ್ದ ನಿಯಮಾವಳಿಯನ್ನು ಪರಿಗಣಿಸಿ ಜಾರಿಗೊಳಿಸುವುದು, 6) ಕಾರ್ಯಸ್ಥಳಗಳಲ್ಲಿ ನೌಕರರು ಕಿರುಕುಳ ರಹಿತ ಮತ್ತು ನೆಮ್ಮದಿಯಾಗಿ ಕರ್ತವ್ಯ ನಿರ್ವಾಹಿಸುವ ವಾತಾವರಣ ಸೃಷ್ಟಿ ಮಾಡಬೇಕು ಎಂಬ ಒತ್ತಾಯಗಳನ್ನು ಮಾಡಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...