NEWS

ಬೇಡಿಕೆ ಈಡೇರದಿದ್ದರೆ ಜನವರಿಯಲ್ಲಿ ಸಾರಿಗೆ ನೌಕರರ ಮುಷ್ಕರ : ಸರ್ಕಾರಕ್ಕೆ KSRTC ಸಮಾನ ಮನಸ್ಕರ ವೇದಿಕೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳಲ್ಲಿ ಮಾಡಲಾಗಿದ್ದ ವಜಾ, ವರ್ಗಾವಣೆ ಇತರ ಶಿಕ್ಷೆ ಪ್ರಕರಣಗಳನ್ನು ಸಂಪೂರ್ಣವಾಗಿ ಬಗೆಹರಿಸದೆ ಮತ್ತು ಸುಳ್ಳು ಪೊಲೀಸ್‌ ಕೇಸ್‌ಗಳನ್ನು ಹಿಂಪಡೆಯದೆ ಸರ್ಕಾರ ಮತ್ತು ನಿಗಮ ಮಂಡಳಿಗಳು ಮೀನಮೇಷ ಎಣಿಸುತ್ತಿವೆ ಎಂದು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಆರೋಪಿಸಿದರು.

ಇಂದು ನಗರದ ಪ್ರಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಚಂದ್ರಶೇಖರ್‌ ಮಾತನಾಡಿ, ಮುಖ್ಯವಾಗಿ ಬಿಎಂಟಿಸಿ ಸಂಸ್ಥೆಯಲ್ಲಿ ವಜಾ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಆಡಳಿತ ಮಂಡಳಿಯ ಕೆಲವು ಅಧಿಕಾರಿಗಳು ಮನಸೊ ಇಚ್ಛೆ ನೌಕರರ ಮೇಲೆ ದ್ವೇಷ ಸಾಧಿಸುತ್ತಿದ್ದು ಸರ್ಕಾರದ ಮಾತನ್ನು ಪಾಲಿಸದೆ ಮತ್ತು ನ್ಯಾಯಾಲಯದ ಆದೇಶಗಳ ವಿರುದ್ಧ ತಡೆಯಾಜ್ಞೆಗಳನ್ನು ತರುವ ಮೂಲಕ ಕಾಲ ವಿಳಂಬ ಮಾಡುತ್ತಿದ್ದಾರೆ ಎಂದರು.

ಸಾರಿಗೆ ನೌಕರರ ಸಮಸ್ಯೆಗಳ ನಿವಾರಣೆಗೆ ಹಾಗೂ ಸರ್ಕಾರ ನೀಡಿರುವ ಲಿಖಿತ ಭರವಸೆಗಳನ್ನು ಈ ಕೂಡಲೆ ಈಡೇರಿಸುವಂತೆ ಒತ್ತಾಯಿಸಿ, ಸಾರಿಗೆ ಸಂಸ್ಥೆಯಲ್ಲಿ ನೋಂದಾಯಿಸಲ್ಪಟ್ಟಿರುವ ಹಲವು ಸಂಘಗಳು “ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ” ಯ ಹೆಸರಿನಡಿಯಲ್ಲಿ ಒಟ್ಟುಗೂಡಿ ಹೋರಾಟಗಳನ್ನು ಮಾಡಿವೆ.

ಅದರಲ್ಲಿ ಮುಖ್ಯವಾಗಿ ಕಳೆದ ಎರಡು ತಿಂಗಳುಗಳಿಂದ ಅಂದರೆ 10/10/2022 ರಿಂದ ಬಳ್ಳಾರಿಯಿಂದ ಪ್ರಾರಂಭ ಮಾಡಿ ಸುಮಾರು 46 ದಿನಗಳ ಕಾಲ ಸುಮಾರು 1938 ಕಿ.ಮೀ ನಾವು ಸೈಕಲ್ ಜಾಥಾ ಮೂಲಕ ಪ್ರಯಾಣ ಮಾಡಿ ರಾಜ್ಯದ 18 ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ರವಾನೆ ಮಾಡುವ, ಶಾಂತಿಯುತ ಹೋರಾಟ ಮಾಡಿದರೂ ಸರ್ಕಾರ ನಮ್ಮ ಕಡೆ ತಿರುಗಿ ನೋಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಇದೇ ಡಿಸೆಂಬರ್‌ 19 ರಿಂದ ಬೆಳಗಾವಿಯಲ್ಲಿ ನಡೆಯಲ್ಲಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದ್ಯಸರಿಂದ ಸರ್ಕಾರ ಬೇಡಿಕೆ ಈಡೇರಿಸುವ ವರೆಗೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮಾಡಲೂ ನಿರ್ಧಾರ ಮಾಡಲಾಗಿದೆ ಎಂದ ತಿಳಿಸಿದರು.

ಬೇಡಿಕೆಗಳು : 1) ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳದ್ದುದ್ದು, ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ ಹಾಗೂ ಇತರ ಶಿಕ್ಷೆಗಳನ್ನು ಯಾವುದೆ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡಿ, 06/04/2021 ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ, ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ನೀಡುವುದು, ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ, ಚೌಕಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ಸರ್ಕಾರದ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಳ್ಳುವುದು.

3) ಮುಷ್ಕರದ ಸಮಯದ ನಾಲ್ಕು ನಿಗಮಗಳ ಸಾರಿಗೆ ನೌಕರರ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

4) ಸಾರಿಗೆ ನಿಗಮಗಳಲ್ಲಿ ಕೂಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು. (1992 ನಂತರ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿರುವುದಿಲ್ಲ).

5) ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಜಾಲಕರನ್ನು ಮತ್ತು ನಿರ್ವಾಹಣೆಯನ್ನು ಖಾಸಗಿಯವರಿಗೆ ವಹಿಸಿರುವುದು, ಇತರೆ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು ಮತ್ತು ಕೆಲವು ಮಾರ್ಗಗಳನ್ನು ಖಾಸಗಿ ವಾಹನಗಳ ಚಾಲನೆಗೆ ಅನುಮತಿ ನೀಡುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಈ ಕೂಡಲೆ ಕೈ ಬಿಡುವುದು.

ಈ ಮೇಲಿನ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ, ನಮ್ಮ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಡುವಂತೆ ಸಾವಿರಾರು ಮನವಿ ಪತ್ರಗಳನ್ನು ಮುಖ್ಯ ಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ ಹಾಗೂ ಅನೇಕ ರೀತಿಯ ಶಾಂತಿಯುತ ಹೋರಾಟಗಳನ್ನು ಮಾಡಿದರು, ನಮ್ಮ ಬೇಡಿಕೆಗಳು ಪೂರ್ಣ ಪ್ರಮಾಣದಲ್ಲಿ ಈಡೇರಿಸಿರುವುದಿಲ್ಲ.

ಚಳಿಗಾಲದ ಅಧಿವೇಶನದ ಸಮಯದಲ್ಲಿ ನಾವು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿದ್ದು, ಆಗಲೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದ ಪಕ್ಷದಲ್ಲಿ ನಾವು ಬೇರೆ ದಾರಿ ಇಲ್ಲದೆ ಜನವರಿಯಲ್ಲಿ “ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ” ಅಡಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು, ಸಾರಿಗೆ ಮುಷ್ಕರದಿಂದ ಸಾರ್ವಜನಿಕರಿಗೆ ಆಗುವ ತೊಂದರೆಗೆ ಸರ್ಕಾರವೆ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ