NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ವೇತನ ಹಿಂಬಾಕಿ ಕೊಡುವ ಕುರಿತು ಕ್ರಮ ಕೈಗೊಳ್ಳಿ – ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 2020ರ ವೇತನ ಪರಿಷ್ಕರಣೆ ಸೌಲಭ್ಯ 2020 ಜನವರಿ 1ರಿಂದ 2023 ಮಾರ್ಚ್‌ನಿಂದೀಚೆಗೆ ಸಿಕ್ಕಿಲ್ಲದಿರುವ ಬಗ್ಗೆ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್‌ ಅವರಿಗೆ ಕೆಎಸ್‌ಆರ್‌ಟಿಸಿ ಮೈಸೂರು ಗ್ರಾಮಾಂತರ ವಿಭಾಗದ ನಿವೃತ್ತ ಇಂಜಿನಿಯರೊಬ್ಬರು ಮನವಿ ಸಲ್ಲಿಸಿದರು.

ಕಳೆದ 2023ರ ನವೆಂಬರ್‌ 7ರಂದು ಕೇಂದ್ರ ಕಾರ್ಮಿಕ ಸಚಿವರಿಗೆ ವೇತನ ಹಿಂಬಾಕಿ ಸೇರಿದಂತೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕಿದ್ದು ಈ ಬಗ್ಗೆ ತಾವು ನಿರ್ದೇಶನ ನೀಡಬೇಕು ಎಂದು ಕೆಎಸ್‌ಆರ್‌ಟಿಸಿಯ ನಿವೃತ್ತ ಅಧಿಕಾರಿ ಕೆ.ವಿ ನಟರಾಜ ಮನವಿ ಸಲ್ಲಿಸಿದ್ದರು.

ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ಕಾರ್ಮಿಕ ಸಚಿವರು ಈ ಸಂಬಂಧ ಕೂಡಲೇ ಕ್ರಮ ಜರುಗಿಸಿ ನೌಕರರ ಸಮಸ್ಯೆಯನ್ನು ಬಗೆಹರಿಸುವಂತೆ ಕರ್ನಾಟಕದ ಪ್ರಾದೇಶಿಕ ಕಾರ್ಮಿಕ ಆಯುಕ್ತ ರಾಹುಲ್ ತ್ಯಾಗಿ ಅವರಿಗೆ ಸೂಚನೆ ನೀಡಿದ್ದಾರೆ.

ಕೇಂದ್ರ ಕಾರ್ಮಿಕ ಸಚಿವರ ಸೂಚನೆ ಮೇರೆಗೆ ದಾಖಲೆಗಳನ್ನು ಪರಿಶೀಲಿಸಿದ  ಪ್ರಾದೇಶಿಕ ಕಾರ್ಮಿಕ ಆಯುಕ್ತ ರಾಹುಲ್ ತ್ಯಾಗಿ ಅವರು ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರಿಗೆ ಇದು ನಿಮ್ಮ ವ್ಯಾಪ್ತಿಗೆ ಬರುವ ವಿಷಯವಾಗಿದ್ದು, ಈ ಬಗ್ಗೆ ತಾವು ಕ್ರಮ ಕೈಗೊಂಡು ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕಳೆದ ಡಿ.12ರಂದು ತಿಳಿಸಿದ್ದಾರೆ.

ಕೆ.ವಿ.ನಟರಾಜ ಅವರು ಸಲ್ಲಿಸಿರುವ ಮನವಿಯಲ್ಲೇನಿದೆ : ಈ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪ್ರಾದೇಶಿಕ ಕಾರ್ಮಿಕ ಆಯುಕ್ತರು (CA) ಪ್ರಧಾನ ಕಚೇರಿ ದೆಹಲಿ, ಇವರ ಪತ್ರದ ಮೂಲಕ ಸ್ವೀಕೃತವಾಗಿರುವ ಅರ್ಜಿದಾರರಾದ ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟ, ಮೈಸೂರು ಗ್ರಾಮಾಂತರ ವಿಭಾಗ ಇವರು ಸಾರಿಗೆ ನೌಕರರಿಗೆ ಸಂಬಂಧಿಸಿದಂತೆ 1-1-2020 ರಿಂದ ವೇತನದ ಪರಿಷ್ಕರಣೆ ನಿವೃತ್ತ ನೌಕರರ ಬಾಕಿ ಉಳಿದಿರುವ ವೇತನ ಮತ್ತು ಪರಿಷ್ಕೃತ ಬಾಕಿ ಮೊತ್ತದ ಗ್ರಾಚ್ಯುಟಿ ಇತ್ಯಾದಿ ಪ್ರಯೋಜನಗಳು ಇತ್ಯರ್ಥವಾಗಿಲ್ಲದ ಕುರಿತು ಮನವಿ ಸಲ್ಲಿಸಿದ್ದಾರೆ.

ಆದ್ದರಿಂದ ಅರ್ಜಿದಾರರು ಸಲ್ಲಿಸಿರುವ ಮನವಿಯ ಕುರಿತು ತಮ್ಮ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಉಲ್ಲೇಖಿತ ಪತ್ರ ಹಾಗೂ ಅದರೊಂದಿಗಿನ ಅಡಕವನ್ನು ಈ ಪತ್ರದೊಂದಿಗೆ ಅಡಕಗೊಳಿಸಿ ತಮ್ಮ ಆದ್ಯ ಅವಗಾಹನೆಗೆ ಮತ್ತು ಮುಂದಿನ ಕ್ರಮಕ್ಕಾಗಿ ಈ ಮೂಲಕ ವರ್ಗಾಯಿಸಿದೆ ಎಂದು ಪ್ರಾದೇಶಿಕ ಕಾರ್ಮಿಕ ಆಯುಕ್ತ ರಾಹುಲ್ ತ್ಯಾಗಿ ಅವರು ಕೆಎಸ್‌ಆರ್‌ಟಿಸಿ ಎಂಡಿ ಅವರಿಗೆ ವರ್ಗಾಹಿಸಿದ್ದಾರೆ.

ಇನ್ನು ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್‌ ಅವರು ಈ ಬಗ್ಗೆ ನಿಗಮದ ನಿವೃತ್ತ ಅಧಿಕಾರಿ ಕೆ.ವಿ.ನಟರಾಜ ಅವರಿಗೆ ಉತ್ತರವನ್ನು ಕೊಡಬೇಕಿದ್ದು, ಎಂಡಿ ಅವರು ಏನು ಉತ್ತರ ನೀಡಲಿದ್ದಾರೆ ಎಂಬ ಬಗ್ಗೆ ಕಾದು ನೋಡಬೇಕಿದೆ.

ಹಿಂದೆ ಪ್ರತಿಭಟನೆಯನ್ನೂ ಮಾಡಿದ್ದಾರೆ: ಹಿಂಬಾಕಿಗಾಗಿ ಕಳೆದ 2023ರ ಅಕ್ಟೋಬರ್‌ 19ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿದರು. ಈ ವೇಳೆ ಸ್ವತಃ ಎಂಡಿ ಅನ್ಬುಕುಮಾರ್‌ ಅವರೆ ಬಂದು ಧರಣಿ ನಿರತರ ಮನವಿ ಸ್ವೀಕರಿಸಿ ಅತೀಶೀಘ್ರದಲ್ಲೇ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಆದರೆ, ಅವರು ಕೊಟ್ಟ ಭರವಸೆ ಈವರೆಗೂ ಈಡೇರಿಲ್ಲ. ಶಕ್ತಿ ಯೋಜನೆಯಿಂದ ನಿಗಮಗಳ ವಾಹನಗಳಲ್ಲಿ ಜನದಟ್ಟಣೆಯೂ ಶೇ.60ರಿಂದ 89ಕ್ಕೆ ಏರಿಕೆಯಾಗಿದೆ. ಇದರಿಂದ ಆರ್ಥಿಕ ಪರಿಸ್ಥಿತಿಯೂ ಉತ್ತಮಗೊಂಡಿದೆ. ಹೀಗಾಗಿ ಯಾವುದೇ ನೆಪವೊಡ್ಡದೇ ನಮಗೆ ಬರಬೇಕಾಗಿರುವುದನ್ನು ನ್ಯಾಯಯುತವಾಗಿ ಕೂಡುವುದಕ್ಕೇ ಆದೇಶ ಮಾಡಿ ಎಂದು ಒತ್ತಾಯಿಸಿದ್ದರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...