CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಡಿಪೋದಲ್ಲೇ ವಿಷ ಸೇವಿಸಿದ ನಾಗಮಂಗಲ ಘಟಕದ ನೌಕರನ ಸ್ಥಿತಿ ಚಿಂತಾಜನಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯದ ನಾಗಮಂಗಲ KSRTC ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್ ಸ್ಥಿತಿ ಚಿಂತಾಜನಕವಾಗಿದೆ.

ನಿನ್ನೆ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಗದೀಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ, ಜಗದೀಶ್​​ನನ್ನು ತಡ ರಾತ್ರಿ ಮೈಸೂರಿನ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ, ಚಾಲಕ ಕಂ ನಿರ್ವಾಹಕ ಜಗದೀಶ್‌ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ವೈದ್ಯರು ಏನಂದ್ರು?: ಆರೋಗ್ಯ ಸ್ಥಿತಿ ಬಗ್ಗೆ ಏನೂ ಹೇಳಲು ಇನ್ನು ಸಾಧ್ಯವಿಲ್ಲ. ಬದುಕಿಸುವ ಪ್ರಯತ್ನ ಮಾತ್ತಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಬುಧವಾರ (ಜು.5) ಮಂಡ್ಯದ ನಾಗಮಂಗಲದ KSRTC ಬಸ್ ಡಿಪೋನಲ್ಲಿ ಜಗದೀಶ್ ವಿಷ ಸೇವಿಸಿದ್ದರು. ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ಮೇರೆಗೆ ಅಧಿಕಾರಿಗಳು ಜಗದೀಶ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಆ ವರ್ಗಾವಣೆ ಮಾಡಿದ್ದಕ್ಕೆ ನೊಂದು ಡಿಪೋದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

ಇತ್ತ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ತಂದೆ ಜೆಡಿಎಸ್ ಪರ ನಿಂತಿದ್ದಕ್ಕೆ ವರ್ಗಾವಣೆ ಶಿಕ್ಷೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೃಷಿ ಸಚಿವರು ಈ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...