NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ರಾತ್ರಿ ಪಾಳಿ ಕರ್ತವ್ಯ ನಿರತ ಚಾಲನಾ ಸಿಬ್ಬಂದಿಗೆ ಸಂಸ್ಥೆಯಿಂದ ಥರ್ಮೋ ಫ್ಲಾಸ್ಕ್!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುವ ಚಾಲನಾ ಸಿಬ್ಬಂದಿಗೆ ಉತ್ತಮ ಗುಣಮಟ್ಟದ 500 ಮಿಲಿ ಲೀಟರ್‌ (ಅರ್ಧ ಲೀಟರ್‌) ಥರ್ಮೋ ಫ್ಲಾಸ್ಕ್ ಅನ್ನು 1600 ಅನುಸೂಚಿಗಳಲ್ಲಿ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಿಗಮ ಪ್ರಯಾಣಿಕರ ಹಾಗೂ ತನ್ನ ಸಿಬ್ಬಂದಿಗಳ ಸುರಕ್ಷತೆಗೆ ಪ್ರಥಮ ಆದ್ಯತೆ ಎಂಬ ನಿಟ್ಟಿನಲ್ಲಿ ತನ್ನ ಕಾರ್ಯಾಚರಣೆ ಹಾಗೂ ಸಂಬಂಧಿಸಿದ ಇತರೆ ಅಂಶಗಳನ್ನು ಕಾಲಕಾಲಕ್ಕೆ ಪರಾಮರ್ಶಿಸಿ ಪರಿಹಾರಾರ್ಥ ಕ್ರಮಗಳನ್ನು ಕೈಗೊಳ್ಳುತ್ತದೆ. ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ ನಿಗಮದ ವಾಹನಗಳು ರಾತ್ರಿ ವೇಳೆ ಕಾರ್ಯಾಚರಣೆಯಲ್ಲಿದ್ದಾಗ ಬೆಳಗಿನ ಜಾವ 3 ರಿಂದ 4 ಗಂಟೆಯ ಸಮಯದಲ್ಲಿ ಹೆಚ್ಚು ಅಪಘಾತಕ್ಕೆ ಒಳಪಟ್ಟಿರುವುದನ್ನು ಗಮನಿಸಲಾಗಿದೆ ಈ ನಿಟ್ಟಿನಲ್ಲಿ ಈ‌ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸುರಕ್ಷಿತ ಸೇವೆ ಒದಗಿಸುವ ಸಲುವಾಗಿ, ರಾತ್ರಿ ಸಾರಿಗೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಅವಶ್ಯಕತೆ ಇರುವುದರಿಂದ, ಅವರ ಕಾರ್ಯ ಕ್ಷಮತೆಯನ್ನು ಉತ್ತಮ ಪಡಿಸುವ ಸಲುವಾಗಿ ಆ ಅವಧಿಯಲ್ಲಿ refresh ಆಗಲು ಕಾಫಿ-ಟೀ ಸೇವಿಸಿ ( ಆ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಯಾವುದೇ ಹೋಟೆಲುಗಳ ಲಭ್ಯತೆಯು ಇರದ ಕಾರಣ) ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಲು ಚಾಲಕರಿಗೆ ಉತ್ತಮ ಗುಣಮಟ್ಟದ ಫ್ಲಾಸ್ಕ್‌ಗಳನ್ನು 1600 ಅನುಸೂಚಿಗಳಲ್ಲಿ ಒದಗಿಸಲಾಗಿದೆ.

ಈ ಕ್ರಮದಿಂದಾಗಿ ಸಂಸ್ಥೆಯ ಚಾಲಕರು ರಾತ್ರಿ ವೇಳೆಯಲ್ಲಿ ವಾಹನಗಳು ನಿಲ್ಲಿಸಿದ ಹೋಟೆಲ್ ಇತ್ಯಾದಿ ಸ್ಥಳಗಳಿಂದ ಟೀ/ಕಾಫಿಯನ್ನು ಫ್ಲಾಸ್ಕ್‌ನಲ್ಲಿ ಸಂಗ್ರಹಿಸಿಕೊಂಡು, ಬೆಳಗಿನ ಜಾವದಲ್ಲಿ ಬಳಸಿ ಸುರಕ್ಷತೆಯಿಂದ ವಾಹನವನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಅವರವರ ಗಮ್ಯ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ