CrimeNEWSನಮ್ಮರಾಜ್ಯ

KSRTC: ಪ್ರತ್ಯೆಕ ಅಪಘಾತ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಬೈಕ್‌ ಡಿಕ್ಕಿ ಹೊಡದೆ ಪರಿಣಾಮ ಮಹಿಳೆ ಸೇರಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ರಾಮನಗರ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ರಾಮನಗರ ಕಡೆಯಿಂದ ಬರುತ್ತಿದ್ದ ಕನಕಪುರ ಘಟಕದ ಬಸ್‌ಗೆ ಬೈಕ್ ಡಿಕ್ಕಿ ಹೋಡೆದಿದ್ದೆ ಪರಿಣಾಮ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಆದರೆ ಮೃತರ ಮಾಹಿತಿ ಇನ್ನು ಪತ್ತೆಯಾಗಿಲ್ಲ.

ವಿಷಯ ತಿಳಿಯುತ್ತಿದ್ದಂತೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇತ್ತ ಮೃತರ ವಿಳಾಸ ಪತ್ತೆ ಕಾರ್ಯದಲ್ಲೂ ನಿರತರಾಗಿದ್ದಾರೆ.

ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಗೊಳಗಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರವಾರದಲ್ಲೂ ಬೈಕ್‌ ಸವಾರ ಸಾವು: ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ