KSRTC: ಮಳೆಗೆ ನೆಲಕ್ಕುರಳಿದ ವಿದ್ಯುತ್ ಕಂಬ ಲೈನ್ ಗಮನಿಸದೆ ಬೈಕ್ ಚಲಾಯಿಸಿ ಸಾರಿಗೆ ಸಂಚಾರಿ ನಿಯಂತ್ರಕ ಮೃತ


ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಸಂಚಾರಿ ನಿಯಂತ್ರಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯ ನಿವಾಸಿ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಕೊನೆಯುಸಿರೆಳೆದ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದ ಸಂಚಾರಿ ನಿಯಂತ್ರಕ. ಇಂದು ಮುಂಜಾನೆ ಈ ಘಟನೆ ನಡೆದಿದೆ.
ಕಳೆದ ರಾತ್ರಿ ಅಂದರೆ ಶುಕ್ರವಾರ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ವೇಳೆ ತಂತಿಗಳು ಕೂಡ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದವು. ಆದರೆ ಅವುಗಳನ್ನು ಗಮನಿಸದೆ ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುತ್ತಿದ್ದಾಗ ಬೈಕ್‌ಗೆ ತಂತಿ ಟಚ್‌ಆಗಿದೆ ಇದರಿಂದ ರೆಡ್ಡಪ್ಪ ಅವರಿಗೂ ವಿದ್ಯುತ್ ಹರಿದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಮಾಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

 








