NEWSVideosನಮ್ಮಜಿಲ್ಲೆನಮ್ಮರಾಜ್ಯ

KSRTC: ಆಗಸ್ಟ್‌ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವೂ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಈವರೆಗೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ‌ಸಾರಿಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ಸಮಿತಿಯ ಪದಾಧಿಕಾರಿಗಳು, ನಮ್ಮ ಜತೆ ಜು.4ರಂದು ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಸಂಬಂಧ ಚರ್ಚಿಸಲು ಮತ್ತೆ ಒಂದು ವಾರದೊಳಗೆ ಸಭೆ ಕರೆಯುವುದಾಗಿ ಭರವಸೆ ನೀಡಿ ಅಂದಿನ ಸಭೆಯನ್ನು ಮುಂದೂಡಿದ್ದರು. ಆದರೀಗ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ, ಮುಷ್ಕರ ನಡೆಸುವುದು ಪಕ್ಕ ಎಂದು ಹೇಳಿದ್ದಾರೆ.

ಇನ್ನು 2020ರ ಜ.1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅದರ 38 ತಿಂಗಳ ಹಿಂಬಾಕಿ ಪಾವತಿ, 2024ರ ಜ.1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಸಂಬಂಧ ಸಿಎಂ ಅಧ್ಯಕ್ಷತೆಯಲ್ಲಿ ಎರಡು ಬಾರಿ ಸಭೆ ನಡೆದಿದೆ. ಆದರೂ ಈವರೆಗೂ ಬೇಡಿಕೆಗಳ ಈಡೇರಿಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಹಳೇ ಕತೆಯನ್ನೇ ಹೇಳಿಕೊಂಡು ಬರಬೇಡಿ ನೌಕರರಿಗೆ ಸಿಗಬೇಕಿರುವ ಸೌಲಭ್ಯ ನೀಡಿ ಎಂದು ಆಗ್ರಹಿಸಿದರು.

ಇದಕ್ಕೆ ತಾವು ಸ್ಪಂದಿಸದಿದ್ದರೆ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದನ್ನು ನಿಲ್ಲಿಸಲಾಗದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಜಂಟಿ ಕ್ರಿಯಾ ಸಮಿತಿ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ