NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ ವಿರುದ್ಧ ಆಕ್ರೋಶ

ಸಾರಿಗೆ ನೌಕರರ ಒಕ್ಕೂಟ ಇಂದು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ನೂರಾರು ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸಬೇಕು ಜತೆಗೆ ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ನೂರಾರು ನೌಕರರು ಭಾಗವಹಿಸಿದ್ದಾರೆ.

ಇಂದು ಬೆಳಗ್ಗೆ ಆರಂಭವಾದ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧಿಜೀ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೇ ಪುಷ್ಪ ನಮನ ಸಲ್ಲಿಸುವ ಮೂಲಕ ಹೋರಾಟಕ್ಕೆ ಚಾಲನೆ ನೀಡಲಾಗಿದೆ.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು 1.15 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದೇವೆ. ಆದರೆ ಸರ್ಕಾರ ಮಾತ್ರ ನಮಗೆ ನ್ಯಾಯಯುತವಾಗಿ ಕೊಡಬೇಕಿರುವುದನ್ನು ಕೊಡುವುದಕ್ಕೆ ಮೀನಮೇಷ ಎಣಿಸುತ್ತಿದೆ ಎಂದು ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಹಾಗೂ ಒಕ್ಕೂಟದ ಪದಾಧಿಕಾರಿ ಚಂದ್ರಶೇಖರ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.ʼ

ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಹೀಗಾಗಿ ಕೂಡಲೇ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಏ.29ರಂದು 450 ಕೋಟಿ ರೂ. ಬಿಡುಗಡೆ ಮಾಡಿದೆ. ಇದರ ಜತೆಗೆ ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ ಭರಿಸಬೇಕು)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ಈ ಕೂಡಲೇ ನಡೆಸಬೇಕು ಈ ನಮ್ಮ ಬೇಡಿಕೆಗಳನ್ನು ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ನುಡಿದಂತೆ ನಡೆಯುವ ಸರ್ಕಾರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರು, ಜತೆಗೆ ಇದುವರೆಗೂ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜತೆ ಸಭೆಗಳು ನಡೆದರು ನೌಕರರಿಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ನಮ್ಮ ನ್ಯಾಯಯುತ ಬೇಡಿಕೆಗಳು ಇನ್ನೂ ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ, ಈಗ ಕಾಲ ಬದಲಾಗಿದೆ ನೀವು ಬೇಡಿಕೆ ಈಡೇರಿಸಬೇಕು ಇಲ್ಲ ನೌಕರರ ಹೋರಾಟ ಎದುರಿಸಬೇಕು ಎಂದು ಎಚ್ಚರಿಕೆ ನೀಡಿದರು.

ಧರಣಿ ಸತ್ಯಾಗ್ರಹದಲ್ಲಿ ನೂರಾರು ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!