NEWS

KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ

ನಾವು ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವಂತ ಸ್ಥಿತಿಗೆ ತಲುಪಿದ್ದೇವೆ, ಈ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ ಬೇಡಿಕೆಗಳ ಈಡೇರಿಕೆಗಾಗಿ ನಾವು ಇಂದು ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದುದಿನದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು ಸಾಗರೋಪಾದಿಯಲ್ಲಿ ನೌಕರರು ಭಾಗವಹಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಕರೆ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸಬೇಕು ಜತೆಗೆ ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟ ಇಂದು (ಮೇ 4ರಂದು) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.

ಈ ಸಂಬಂಧ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಹಾಗೂ ಒಕ್ಕೂಟದ ಪದಾಧಿಕಾರಿ ಚಂದ್ರಶೇಖರ್‌ ಮಾತನಾಡಿ, ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು 1.15 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದ್ದರೂ ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.

ಇನ್ನಾದರೂ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಏ.29ರಂದು 450 ಕೋಟಿ ರೂ. ಬಿಡುಗಡೆ ಮಾಡಿದೆ. ಇದರ ಜತೆಗೆ ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ ಭರಿಸಬೇಕು)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ಈ ಕೂಡಲೇ ನಡೆಸಬೇಕು ಎಂಬ ಈ ಬೇಡಿಕೆಗಳನ್ನು ಇಟ್ಟುಕೊಂಡು ಒಕ್ಕೂಟದಿಂದ ಒಂದುದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು ಸಮಸ್ತೆ ನೌಕರರು ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.

ನಾವು ಕಾಯ-ವಚಾ-ಮನಸ್ಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಒಲಿದು ಬಂದಿವೆ. ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾಂದ ಶಕ್ತಿ ಯೋಜನೆಯನ್ನು ಜಾರಿಗೆ ತರುವ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಾಕಷ್ಟು ಬಸ್ಸುಗಳ ಮತ್ತು ನೌಕರರ ಕೊರತೆ ಇದ್ದರೂ ಸಾರಿಗೆ ನೌಕರರು ಕಷ್ಟ ಪಟ್ಟು ದುಡಿದ ಪರಿಣಾಮ ಇಂದು ಶಕ್ತಿ ಯೋಜನೆಯಲ್ಲಿ ನೂರಾರು ಕೋಟಿಗಳ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ದಾಖಲೆಯು ಸಹ ನಿರ್ಮಾಣವಾಗಿದೆ. ಜತೆಗೆ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಯೋಜನೆ ಎಂದರೆ ಶಕ್ತಿ ಯೋಜನೆ ಎಂದರೆ ಸುಳ್ಳಾಗಲಾರದು.

ನುಡಿದಂತೆ ನಡೆಯುವ ಸರ್ಕಾರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದೆ. ಇದರ ಜತೆಗೆ ಇದುವರೆಗೂ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆಗಳು ನಡೆದಿವೆಯೇ ಹೊರತು ನೌಕರರಿಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ನಮ್ಮ ನ್ಯಾಯಯುತ ಬೇಡಿಕೆಗಳು ಇನ್ನೂ ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವಂತ ಸ್ಥಿತಿಗೆ ತಲುಪಿದ್ದೇವೆ, ಈ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ ಬೇಡಿಕೆಗಳ ಈಡೇರಿಕೆಗಾಗಿ ನಾವು ಇಂದು ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದುದಿನದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು ಸಾಗರೋಪಾದಿಯಲ್ಲಿ ನೌಕರರು ಭಾಗವಹಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಕರೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!