NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಬಂಧನ- ಸರ್ಕಾರದ ವಿರುದ್ಧ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸದೆ ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪೊಲೀಸರ ಬಿಟ್ಟು ಸರ್ಕಾರ ಮೊಟಕುಗೊಳಿಸುವ ಯತ್ನ ನಡೆಸಿದೆ. ಆದರೆ ಸಾರಿಗೆ ನೌಕರರು ನಾವು ಯಾವುದೇ ಕಾರಣಕ್ಕೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಇದೇ ಏ.8ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಹೋರಟು ಇಂದಿಗೆ 14 ದಿನಗಳು ಕಳೆದಿದ್ದು, ಇಂದು (ಏ.21) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನಕ್ಕೆ ಬರುವ ಸಲುವಾಗಿ ನೆಲಮಂಗಲದಿಂದ ಹೊರಟಿದ್ದ ಪಾದಯಾತ್ರೆಯನು ಅರಿಸಿನಕುಂಟೆ ಬಳಿ ಪೊಲೀಸರಿಂದ ತಡಸಿದ ಸರ್ಕಾರ ಬಳಿಕ ಫ್ರೀಡಂ ಪಾರ್ಕ್‌ ಬರುವುದಕ್ಕೆ ಬಿಟ್ಟಿತ್ತು. ಆದರೆ ಪಾದಯಾತ್ರೆ ಫ್ರೀಡಂಪಾರ್ಕ್‌ಗೆ ಬರುತ್ತಿದ್ದಂತೆ ಪೊಲೀಸರು ಸಾರಿಗೆ ನೌಕರರನ್ನು ಬಂಧಿಸಿದ್ದಾರೆ.

ಈ ನಡುವೆ ನೀವು ನಮ್ಮನ್ನು ಬಂಧಿಸಿ ಎಲ್ಲಿ ಬಿಡುತ್ತೀರೋ ಅಲ್ಲಿಯೇ ನಾವು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ನಿಮ್ಮ ಭರವಸೆಯನ್ನು ನಂಬಿಕೊಂಡು 3 ವರ್ಷ ಕಳೆದಿದ್ದಾಯಿತು ಇನ್ನು ನಾವು ಸುಮ್ಮನೇ ಕೂರುವುದಿಲ್ಲ ನೀವು ಕೊಟ್ಟ ಪ್ರಣಾಳಿಕೆ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುವುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ಅಲ್ಲದೆ, ನಮಗು ಒಂದು ತಾಳ್ಮೆ ಇತ್ತು ಆದರೆ, ಆ ತಾಳ್ಮೆ ಕಟ್ಟೆ ಒಡೆಯುವುದಕ್ಕೆ ನೀವೇ ಕಾರಣರಾಗಿದ್ದೀರಿ ಇನ್ನು ನಾವು ಸುಮ್ಮನೇ ಕೂರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಗುಡುಗಿದ್ದಾರೆ. ಸಾರಿಗೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವುದಕ್ಕೆ ಆಗುತ್ತಿಲ್ಲ ಎಂದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿಕಾರುತ್ತಿದ್ದಾರೆ.

ಇನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸಾರಿಗೆ ನೌಕರರು ಬರುತ್ತಿದ್ದಂತೆ ಬಂಧಿಸಿದ ಪೊಲೀಸರ ವಿರುದ್ಧವು ಅಸಮಾಧಾನ ವ್ಯಕ್ತಪಡಿಸಿರುವ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳು ನಮ್ಮನ್ನು ಮಾತ್ರ ಬಂಧಿಸಿದ್ದೀರಿ ಅದೇ ನಿಮ್ಮ ಪಕ್ಷದ ಕಾರ್ಯಕರ್ತರು ಇದೇ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೇಂದ್ರ ವಿರುದ್ಧ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.ಅಲ್ಲದೆ ಈ ಮಲತಾಯಿ ದೋರಣೆ ಬಿಟ್ಟು ನೌಕರರಿಗೆ ಕೊಡಬೇಕಿರುವುದನ್ನು ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈಗ ನಮ್ಮನ್ನು ಬಂಧಿಸಿದ್ದೀರಿ ನೀವು ಎಲ್ಲಿ ಬಿಟ್ಟರೂ ಅಲ್ಲಿ ನಾವು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದು ಖಚಿತ ಈ ಬಗ್ಗೆ ನಿಮ್ಮ ಸರ್ಕಾರಕ್ಕೆ ತಿಳಿಸಿ ಎಂದು ಪೊಲೀಸರಿಗೆ ಹೇಳಿದ್ದಾರೆ ಸಾರಿಗೆ ನೌಕರರು.

ಇನ್ನು ನಮ್ಮ ಬೇಡಿಕೆಗಳಾದ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಕ್ರಮತೆಗೆದುಕೊಳ್ಳಬೇಕು.

01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ
ಭರಿಸಬೇಕು)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ಈ ಕೂಡಲೇ ನಡೆಸಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಪಾದಯಾತ್ರೆ ಮಾಡಿರುವ ಒಕ್ಕೂಟ ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸದ್ಯ ಈಗ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೌಕರರನ್ನು ಪೊಲೀಸರು ಬಂಧಿಸಿ ಮೈಸೂರು ರಸ್ತೆಯಲ್ಲಿರುವ ಸಿಆರ್‌ಪಿಎಫ್‌ ಮೈದಾನದಲ್ಲಿ ಬಿಟ್ಟಿದ್ದಾರೆ. ನಾವು ಇಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ನೌಕರರು ಹೇಳಿ ಮುಂದುವರಿಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ