NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವರ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕೊಡಬೇಕಾಗಿರುವ ವೇತನ ಹೆಚ್ಚಳದ ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಚರ್ಚಿಸಲು ನಾಳೆ (ಡಿ.2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕರೆದಿದ್ದಾರೆ.

ಶನಿವಾರ ಸಂಜೆ 5 ಗಂಟೆಗೆ ಶಾಂತಿನಗರದಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಜಂಟಿ ಕ್ರಿಯಾ ಸಮಿತಿಯಲ್ಲಿರುವ ಸಂಘಟನೆಗಳ ಇಬ್ಬರು ಪದಾಧಿಕಾರಿಗಳು ಭಾಗವಹಿಸಬಹುದು ಎಂದು ಸಂಸ್ಥೆಯ ಸಿ&ಜಾ ನಿರ್ದೇಶಕರು ತಿಳಿಸಿದ್ದಾರೆ.

2020 ಜನವರಿ 1ರಿಂದ ಅನ್ವಯವಾಗುವಂತೆ ಜಾರಿಯಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನೂ ಈವರೆಗೂ ನೀಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ತಮ್ಮ ನಿರ್ಧಾರವನ್ನು ತಿಳಿಸಬೇಕು. ಅದಕ್ಕಾಗಿ ಸಭೆ ಕರೆಯಿರಿ ಎಂದು ಜಂಟಿ ಕ್ರಿಯಾ ಸಮಿತಿ ನ.27ರಂದು ಮನವಿ ಸಲ್ಲಿಸಿತ್ತು. ಆ ಮನವಿ ಮೇರೆಗೆ ಸಭೆ ಕರೆಯಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಕಳೆದ ನ.17ರಂದು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ವೇತನ ಹೆಚ್ಚಳ ಹಿಂಬಾಕಿ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನವೆಂಬರ್‌20 ವರೆಗೆ ಸಮಯಕೊಡಿ, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿಮಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಆದರೆ ನ.20ರಂದು ಯಾವುದೇ ಬೆಳವಣಿಗೆ ಆಗಲಿಲ್ಲ. ಇದರಿಂದ ಪದಾಧಿಕಾರಿಗಳು ಅಸಮಾಧಾನಗೊಂಡು ಮತ್ತೆ ನ.27ರಂದು ಸಭೆ ಕರೆಯುವಂತೆ ಮನವಿ ಸಲ್ಲಿಸಿದ್ದರು.

ಸಭೆಯಲ್ಲಿ ಬಹುತೇಕ ಚರ್ಚೆಯಾಗುವ ವಿಷಯಗಳು: ಹಿಂದಿನ ಸರ್ಕಾರವು 2020 ರಿಂದ ಸಮಸ್ತ ನೌಕರರಿಗೂ ಶೇ.15 ರಷ್ಟು ವೇತನ ಹೆಚ್ಚಳ ಮಾಡಿದೆ. ಆ ವೇತನ ಹೆಚ್ಚಳ ಜಾರಿಯಾಗಿದ್ದರೂ ಕೂಡ (01-0 2020 ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಹೆಚ್ಚಳದ ಬಾಕಿಯನ್ನು ಕೊಟ್ಟಿಲ್ಲ.

ಅಲ್ಲದೆ ಈ ಅವಧಿಯಲ್ಲಿ ಹಲವಾರು ನೌಕರರು ನಿವೃತ್ತಿ, ಸ್ವಯಂ ನಿವೃತ್ತಿ, ರಾಜೀನಾಮೆ ನೀಡಿದ್ದಾರೆ. ವಜಾಗೊಂಡಿರುವುದು ಸೇರಿ ಇತ್ಯಾದಿ ಕಾರಣಗಳಿಗೆ ಸೇವಾ ವಿಮುಕ್ತಿ ಹೊಂದಿರುವ ನೌಕರರಿಗೆ ದಿನಾಂಕ 17 -3- 2023 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಪ್ರಸ್ತಾವನೆಯಿಲ್ಲದ ಕಾರಣ, ಪೇ ಫಿಕ್ಸೆಷನ್ ( Pay Fixation) ಮಾಡಿಲ್ಲ, ಇದರಿಂದ ನೌಕರರು ಹೊಸ ವೇತನದ ಹೆಚ್ಚಳ ಮತ್ತು ಇತರೆ ಆರ್ಥಿಕ ಸವಲತ್ತುಗಳಿಂದ ವಂಚಿತರಾಗಿದ್ದಾರೆ.

ಭವಿಷ್ಯನಿಧಿ ವಂತಿಗೆ, ಗ್ರಾಚ್ಯುಟಿ, ರಜಾ ನಗದೀಕರಣ, ತುಟ್ಟಿ ಭತ್ಯೆ, ಸಹಕಾರ ಸಂಘಗಳ ಬಾಕಿ, ಜೀವವಿಮೆ ಪ್ರೀಮಿಯಂ ಇತ್ಯಾದಿಗಳ ಬಾಕಿ 2000 ಕೋಟಿ ರೂಪಾಯಿಗಳನ್ನು ಮೀರುತ್ತದೆ. ಶಕ್ತಿ ಯೋಜನೆಗೆ ನಿಗಮಗಳು ವೆಚ್ಚ ಮಾಡುತ್ತಿರುವ ಹಣವನ್ನು ಕಾಲ ಕಾಲಕ್ಕೆ ಸಂಪೂರ್ಣವಾಗಿ ಕೊಡಬೇಕು. ಈಗ ಬಾಕಿ ಉಳಿದಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು.

ಇನ್ನು ಎಲ್ಲ ಸಾರಿಗೆ ನಿಗಮಗಳಲ್ಲಿಯೂ ಕಾರ್ಮಿಕ ಸಂಘಟನೆಗಳೊಂದಿಗೆ ಕಾಲ ಕಾಲಕ್ಕೆ ದ್ವಿಪಕ್ಷೀಯ ಮಾತುಕತೆ ನಡೆಸಿ, ನೌಕರರ ಸಮಸ್ಯೆಗಳನ್ನು ಬಗೆಹರಿಸುವ ವ್ಯವಸ್ಥೆ ಜಾರಿಗೆ ತರಬೇಕು. ಏಪ್ರಿಲ್ 2021 ರ ಮುಷ್ಕರದ ಸಂದರ್ಭದಲ್ಲಿ ವಜಾ ಆಗಿರುವ ನೌಕರರನ್ನು ಮತ್ತು FIR ಆಗಿರುವ ಕಾರ್ಮಿಕರನ್ನೂ ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕು ಎಂಬ ವಿಷಯಗಳು ಪ್ರಮುಖವಾಗಿ ನಾಳೆಯ ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ