NEWSನಮ್ಮರಾಜ್ಯ

KSRTC: ಸಾರಿಗೆ ಮಿತ್ರ HRMS ಮೊಬೈಲ್ 2.0 ಆ್ಯಪ್‌- ಬಿಡುಗಡೆ ಮಾಡಿದ ಸಾರಿಗೆ ಸಚಿವ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗಾಗಿ ಅಭಿವೃದ್ಧಿಪಡಿಸಿರುವ ಸುಧಾರಿತ ಆವೃತ್ತಿಯ 2.0 ಸಾರಿಗೆ ಮಿತ್ರ ಎಚ್‌ಆರ್‌ಎಂಎಸ್ ಮೊಬೈಲ್ ಆ್ಯಪನ್ನು ಗುರುವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೋಕಾರ್ಪಣೆಗೊಳಿಸಿದರು.

ಈ ಆಪ್‌ ಮುಖ್ಯವಾಗಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸುವುದರ ಜತೆಗೆ ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ. ಹೀಗಾಗಿ ಹೊಸ ವರ್ಷದ ಉಡುಗೊರೆಯಾಗಿ ನಿಗಮವು ಈ ನೂತನ ಆ್ಯಪನ್ನು ಬಿಡುಗಡೆಗೊಳಿಸಿದೆ.

ಆಪ್‌ ವೈಶಿಷ್ಟ್ಯವೇನು?: ಸಂಸ್ಥೆಯ ನೌಕರರಿಗೆ ತ್ವರಿತ ಸಮಯದಲ್ಲಿ ಮಾನವ ಸಂಪನ್ಮೂಲ ಸೇವೆಗಳನ್ನು ಸ್ಮಾರ್ಟ್ ಫೋನ್ ಮೂಲಕ ಒದಗಿಸುವ ಉದ್ದೇಶದಿಂದ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಎಚ್‌ಆರ್‌ಎಂಸ್ ಮೊಬೈಲ್ ಆ್ಯಪ್ ಸಿದ್ಧಪಡಿಸಿದೆ. ಇದರಲ್ಲಿ ಜಿಯೋ-ಫೆನ್ಸಿಂಗ್ ಆಧಾರಿತ ಹಾಜರಾತಿ ವ್ಯವಸ್ಥೆ, ಮಾಸಿಕ ಹಾಜರಾತಿ ವೀಕ್ಷಣೆ, ವೈಯಕ್ತಿಕ ವಿವರಗಳು, ಸೇವಾ ದಾಖಲಾತಿ (ಸರ್ವಿಸ್ ರಿಜಿಸ್ಟರ್) ವಿವರಗಳು, ಕುಟುಂಬ ಸದಸ್ಯರ ಮಾಹಿತಿ ಹಾಗೂ ನಾಮನಿರ್ದೇಶಿತ (ನಾಮಿನಿ) ವಿವರಗಳ ವೀಕ್ಷಣೆ ಮಾಡಬಹುದಾಗಿದೆ.

ಇನ್ನು ಮಾಸಿಕ ವೇತನ ಪಟ್ಟಿ (ಪೇ ಸ್ಲಿಷ್)ಗಳನ್ನು ಒಂದೇ ಕ್ಲಿಕ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ರಜೆ ನಿರ್ವಹಣೆ ವ್ಯವಸ್ಥೆ ಮೂಲಕ ಖಾತೆಯಲ್ಲಿರುವ ರಜೆ ವಿವರಗಳ ಪರಿಶೀಲನೆ ಜತೆಗೆ ನಿಗಮದ ವಿವಿಧ ವಿಭಾಗಗಳಿಂದ ಹೊರಡಿಸಲಾಗುವ ಸುತ್ತೋಲೆ ವಿವರಗಳ ಲಭ್ಯತೆ ಬೆರಳಂಚಿನಲ್ಲಿಯೇ ಸಿಗಲಿದೆ.

ಅಲ್ಲದೆ ನೌಕರರ ಶ್ರೇಯೋಭಿವೃದ್ಧಿಗೆ ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಆ್ಯಪ್‌ ಬಿಡುಗಡೆ ವೇಳೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ, ನಿರ್ದೇಶಕರಾದ ಡಾ. ನಂದಿನಿ ದೇವಿ ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳು ಇದ್ದರು.

Deva
the authorDeva

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!