Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

ಕೇಂದ್ರ ಕಚೇರಿಯ ಎಲ್ಲ ಅಧಿಕಾರಿಗಳು ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ಚಾಲಕ ನಾರಾಯಣ ಅವರ ಆರೋಗ್ಯ ವಿಚಾರಿಸಿ ನೌಕರನಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿ, ಸಂಸ್ಥೆಯು ನಿಮ್ಮ ಪರವಾಗಿ ಇದೆ ಎಂದು ಮನವರಿಕೆ ಮಾಡಿದರು.

ಘಟನೆ ವಿವರ: ಡಿ.10ರಂದು ತುಮಕೂರು – ಮೈಸೂರು ನಡುವೆ ಮಾರ್ಗಾಚರಣೆಯಲ್ಲಿದ್ದಾಗ ತುಮಕೂರು ಲಾ ಕಾಲೇಜಿನ ಹತ್ತಿರ ಕುಣಿಗಲ್ ಘಟಕದ ಚಾಲಕ ನಾರಾಯಣ ಅವರಿಗೆ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಹಲ್ಲೆ ಮಾಡಿದ್ದಾರೆ.

ಹಲ್ಲೆಗೆ ಕಾರಣ ಬಸ್‌ ತುಂಬಾ ರಷ್‌ ಇದ್ದ ಕಾರಣ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕ ನಾರಾಯಣ ನೇತಾಡಿಕೊಂಡು ಬರಬೇಡಿ ಒಳಗೆ ಬನ್ನಿ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಬಸ್‌ ಇಳಿದು ಚಾಲಕನ ಸೀಟ್‌ ಬಳಿ ಬಂದು ಹಲ್ಲೆ ಮಾಡಿದ್ದಾರೆ.

ಚಾಲಕ ಕರ್ತವ್ಯದ ಮೇಲಿದ್ದಾಗಲೇ ಇಚ್ಛಾನುಸಾರವಾಗಿ ಹೊಡೆದಿರುವ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಸ್ಥಳ ಮಹಜರ್‌ ಮಾಡದೆ ವಿದ್ಯಾರ್ಥಿಗಳನ್ನು ಬಂಧಿಸದೆ ಸಬೂಬು ಹೇಳಿಕೊಂಡು ದೂರು ಕೊಟ್ಟ ಚಾಲಕ ಮತ್ತು ನಿರ್ವಾಹಕರನ್ನು ಅಲೆಸಿದ್ದಾರೆ.

ಗುರುವಾರ ಬೆಳಗ್ಗಿನಿಂದ ಸಂಜೆವರೆಗೂ ಕಾಯಿಸಿ ಬಳಿಕ ಸ್ಥಳ ಮಹಜರ್‌ ಮಾಡದೆ ನಾಳೆ ಬನ್ನಿ ಎಂದು ವಾಪಸ್‌ ಕಳಿಸಿದ್ದಾರೆ. ಜತೆಗೆ ಹಲ್ಲೆ ಮಾಡಿದವರ ವಿರುದ್ಧವೂ 48 ಗಂಟೆ ಕಳೆದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮನನೊಂದ ಚಾಲಕ ನಾರಾಯಣ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇತ್ತ ವಿಷ ಕುಡಿದಿರುವುದು ತಿಳಿದ ಕೂಡಲೇ ಅವರ ಸ್ನೇಹಿತರು ಕುಣಿಗಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಷ್ಟೆಲ್ಲವಾದರೂ ಕೂಡ ಸಾರಿಗೆ ಸಂಸ್ಥೆಯಿಂದ ಯಾವುದೇ ಅಧಿಕಾರಿಗಳು ಈ ಬಗ್ಗೆ ವಿಚಾರಿಸಿಲ್ಲ. ಚಾಲಕರ ನೋವಿಗೆ ಸ್ಪಂದಿಸಿಲ್ಲ. ಎಫ್ಐಆರ್ ಆದರೂ ಕೂಡ ಹಲ್ಲೆಕೋರರ ವಿರುದ್ಧ ಪೊಲೀಸರು ಕ್ರಮ ಜರುಗಿಸದೆ ಹೊರಗಡೆ ಬಿಟ್ಟಿರುವುದು ಅವಮಾನ ಆಗಿದೆ ಎಂದು ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...