KSRTC: TV9 ನೇರ ಪ್ರಸಾರದಲ್ಲಿ ಸಾರಿಗೆ ನೌಕರರ ಸಮಸ್ಯೆ ಅನಾವರಣ – ಕೊಟ್ಟ ಭರವಸೆ ಈಡೇರಿಸುವ ಆಶ್ವಾಸನೆ ಕೊಟ್ಟ ಸಚಿವರು
ಬೆಂಗಳೂರು: ಕಳೆದ 2023ರ ಮೇ 10ರಂದು ನಡೆದ ವಿಧಾನಸಭೆ ಚುನಾವಣೆ ವೇಳೆ ಸಾರಿಗೆ ನೌಕರರಿಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವ ಮಾತನ್ನು ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿ ಹಾಗೂ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಟಿವಿ9 ಕನ್ನಡ ಈ ಹಿಂದೆ ಹಮ್ಮಿಕೊಂಡಿದ್ದ ಕನಸಿನ ಕರುನಾಡು ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರು, ಕಾನೂನಾತ್ಮಕವಾಗಿಯೇ ಸಿಗಬೇಕಿರುವ ಸೌಲಭ್ಯದಿಂದ ಸಾರಿಗೆ ನೌಕರರು ವಂಚಿತರಾಗಿದ್ದಾರೆ. ನಮ್ಮಲ್ಲಿ ಇರುವ ವೇತನ ತಾರತಮ್ಯತೆಯನ್ನು ಸರಿಪಡಿಸಬೇಕು ಎಂದರು.
ನಮಗೂ ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ನೀಡಬೇಕು. ಸಾರಿಗೆ ನೌಕರರಿಗೆ ಕಳೆದ ಬಾರಿ ಆಗಿರುವ ಶೇ.15ರಷ್ಟು ವೇತನ ಹೆಚ್ಚಳವನ್ನು ಸೇರಿಸಿಕೊಂಡರೂ 19,935 ರೂಪಾಯಿ ಬೇಸಿಕ್ ಇದ್ದರೆ ಇದೇ ಸರಿಸಮಾನ ಹುದ್ದೆಯಲ್ಲಿರುವ ಸರ್ಕಾರಿ ನೌಕರರಿಗೆ 25,038 ರೂ.ಗಳು ಬೇಸಿಕ್ ಇದೆ. ಈ ವ್ಯತ್ಯಾಸವನ್ನು ಸರಿಪಡಿಸಬೇಕಾದರೆ ನಮಗೂ ವೇತನ ಆಯೋಗ ಮಾದರಿಯಲ್ಲೇ ವೇತನ ಕೊಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಮಧ್ಯಪ್ರವೇಶ ಮಾಡಿದ ಟಿವಿ9 ಮುಖ್ಯ ನಿರ್ಮಾಪಕ (Chief producer) ರಂಗನಾಥ್ ಭಾರದ್ವಾಜ್ ಅವರು ಹೌದು ಸಾರಿಗೆ ನೌಕರರು ಶ್ರಮ ಜೀವಿಗಳಾದರೂ ಅವರು ಪ್ರತಿನಿತ್ಯ ಸಾಯಬೇಕು ಅಂತ ಪರಿಸ್ಥಿತಿ ಇದೆ. ಇದನ್ನು ನೀವು ಒಪ್ಪುತ್ತೀರ ಎಂದು ಸಾರಿಗೆ ಸಚಿವರನ್ನು ಪ್ರಶ್ನಿಸಿದರು.
ಸಾರಿಗೆ ಸಚಿವರು ಅದನ್ನು ಒಪ್ಪಿಕೊಂಡರು. ಜತೆಗೆ ಸಾರಿಗೆ ನಿಗಮಗಳಿಗೆ ಸರ್ಕಾರಗಳು ಸಪೋರ್ಟ್ ಮಾಡಬೇಕು. ಕಾರಣ ಈ ನಿಗಮಗಳು ಸೇವೆಗಾಗಿ ಇರುವುದು ಲಾಭದ ದೃಷ್ಟಿಯಲ್ಲಿ ನೋಡಬಾರದು ಎಂದು ತಮ್ಮದೇ ಸರ್ಕಾರ ಸೇರಿದಂತೆ ಎಲ್ಲ ಸರ್ಕಾರಗಳು ಸಾರಿಗೆ ನಿಗಮಗಳನ್ನು ಲಾಭದ ದೃಷ್ಟಿಯಿಂದ ನೋಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು 2015ರಲ್ಲಿ ಪ್ರಯಾಣದ ಟಿಕೆಟ್ ದರವನ್ನು ಹೆಚ್ಚಿಸಿದ್ದು ಬಿಟ್ಟರೆ ಈವರೆಗೂ ಹೆಚ್ಚಳವಾಗಿಲ್ಲ. ಆದರೆ ಅಂದು ಡೀಸೆಲ್ ದರ ಎಷ್ಟಿತ್ತು ಇಂದು ಎಷ್ಟಿದೆ. ಹೀಗಾಗಿ ಸರ್ಕಾರಗಳು ಸಾರಿಗೆ ನಿಗಮಗಳನ್ನು ಸಪೋರ್ಟ್ ಮಾಡಬೇಕು ಎಂದು ಸಚಿವರೇ ಮನವಿ ಮಾಡಿದರು.
ಇನ್ನು ಇದಕ್ಕೂ ಮೊದಲು ಮಾತನಾಡಿದ ಸಚಿವರು ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ಸಾರಿಗೆ ನೌಕರರು ವೇತನ ಪಡೆಯುತ್ತಿದ್ದಾರೆ. ಆದರೆ ಕೆಲಸಕ್ಕೆ ಸೇರಿದ ಆರಂಭದ ದಿನಗಳಲ್ಲಿ ಕಡಿಮೆ ಇರುತ್ತದೆ ಎಂದು ಹೇಳಿದರು.
ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿ ಚಂದ್ರು ಇಲ್ಲ ಸಾರ್ ಇದು ಕೆಲವರು ನಿಮ್ಮನ್ನು ಯಾರೋ ದಾರಿ ತಪ್ಪಿಸಿದ್ದಾರೆ ಎಂದ ಅವರು, ನಾವು 15-20 ವರ್ಷ ಸೇವೆ ಮಾಡಿದರೂ ನಮಗೆ 20-30 ಸಾವಿರ ರೂಪಾಯಿ ವೇತನವಿದೆ. ಅದೇ ಸರ್ಕಾರಿ ನೌಕರರಿಗೆ 40-50 ಸಾವಿರ ರೂಪಾಯಿ ಇದೆ. ಅಂದರೆ ಈ ಅಜಗಜಾಂತರ ವ್ಯತ್ಯಾಸವನ್ನು ತಾವು ಸರಿಪಡಿಸಬೇಕು ಎಂದು ಮನವಿ ಮಾಡಿದರು.
ಇನ್ನು ಮನಗೆ ಮುಷ್ಕರ ಮಾಡಿ ನೌಕರರ ಮನೆಹಾಳು ಆಗುತ್ತಿರುವುದನ್ನು ತಪ್ಪಿಸಲು ತಾವು ಈಗಲೇ 7ನೇ ವೇತನ ಆಯೋಗ ಅಳವಡಿಸಿ ನಾಲ್ಕು ವರ್ಷಕ್ಕೊಮೆ ಹಲವು ನೌಕರರು ಕೆಲಸ ಕಳೆದುಕೊಂಡು ಬೀದಿಗೆ ಬರುತ್ತಿರುವುದನ್ನು ತಪ್ಪಿಸಬೇಕು. ನೀವೆ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಕೊಟ್ಟ ಸರಿ ಸಮಾನ ವೇತನ ಭರವಸೆಯನ್ನು ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ಇನ್ನು 2021ರ ಮುಷ್ಕರದ ವೇಳೆ 2500 ನೌಕರರನ್ನು ವಜಾ ಮಾಡಲಾಗಿತ್ತು. ಆ ಬಳಿಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಎಫ್‌ಐಆರ್ ಆಗಿದೆ ಎಂಬ ಕಾರಣಕ್ಕೆ ಇನ್ನೂ 64 ಮಂದಿಯನ್ನು ಈವರೆಗೂ ಕೆಲಸಕ್ಕೆ ತೆಗೆದುಕೊಂಡಿಲ್ಲ. ಅವರನ್ನು ತೆಗೆದುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು.
ಅದಕ್ಕೆ ಟಿವಿ9ನ ರಂಗನಾಥ್ ಭಾರದ್ವಾಜ್ ಅವರು ಧ್ವನಿಗೂಡಿಸಿ 64 ಮಂದಿಯನ್ನು ತೆಗೆದುಕೊಳ್ಳುತ್ತೀರಾ ಎಂದರು. ಈಗಾಗಲೇ ಕೋರ್ಟ್‌ನಲ್ಲಿ ಪ್ರಕರಣ ಮುಗಿಯುತ್ತಾ ಬಂದಿದೆ ನಾವು ಆ 64 ಮಂದಿಯನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಒಟ್ಟಾರೆ ಟಿವಿ9 ಕನ್ನಡ ವಾಹಿನಿ ನಡೆಸಿದ ಕನಸಿನ ಕರುನಾಡು ಕಾರ್ಯಕ್ರಮ ನೇರಪ್ರಸಾರದ ಮೂಲಕ ಸಾರಿಗೆ ನೌಕರರು ಪಡೆಯುತ್ತಿರುವ ವೇತನ ವ್ಯತ್ಯಾಸದ ಬಗ್ಗೆ ಸಾರಿಗೆ ಸಚಿವರಿಗೆ ಸ್ಪಷ್ಟವಾಗಿಯಿತು. ಕೆಲವರು ಸಚಿವರು ಮತ್ತು ಸರ್ಕಾರದ ದಾರಿ ತಪ್ಪಿಸಿ ನೌಕರರಿಗೆ ಸಿಗಬೇಕಿರುವ ಸೌಲಭ್ಯದಿಂದ ವಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುವುದು ಸಚಿವರ ಹೇಳಿಕೆಯಿಂದಲೇ ಸ್ಪಷ್ಟವಾಯಿತು.
ಹೌದು! ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ಸಾರಿಗೆ ನೌಕರರು ವೇತನ ಪಡೆಯುತ್ತಿದ್ದಾರೆ ಎಂದು ಹಸಿಸುಳ್ಳು ಹೇಳಿ ಸಾರಿಗೆ ಸಚಿವರ ದಿಕ್ಕು ತಪ್ಪಿಸಿರುವುದು ಬಹಳ ಸ್ಪಷ್ಟವಾಗಿ ತಿಳಿಯಿತು. ಇನ್ನು ಇಂಥವರು ಇರುವುದೇ ನೌಕರರ ಮನೆಹಾಳು ಮಾಡುವುದಕ್ಕೇ ಎಂಬುವುದು ಸಚಿವರಿಗೆ ಈ ಮೂಲಕವಾದರೂ ಅರ್ಥವಾದರೆ ಸಾಕು.
ನೌಕರರು ಕೂಡ ಈ ಬಗ್ಗೆ ಎಚ್ಚೆತ್ತು ಇಂಥ ಮನೆ ಹಾಳುಮಾಡುವ ಐಡಿಯಾವನ್ನು ಸರ್ಕಾರ, ಸಾರಿಗೆ ಸಚಿವರು ಮತ್ತು ಅಧಿಕಾರಿಗಳಿಗೆ ಕೊಡುತ್ತಿರುವವರನ್ನು ದೂರವಿಟ್ಟರೆ ಮುಂದಿನ ದಿನಗಳಲ್ಲಾದರೂ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಪಡೆದು ಇರುವ ಕಷ್ಟದ ಜೀವನವನ್ನು ಸುಧಾರಿಸಿಕೊಳ್ಳಬಹುದು.
ಕಾರ್ಯಕ್ರಮದಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿ ಕೆಬಿಎನ್‌ಎನ್ ನಾಗರಾಜ್ ಸೇರಿದಂತೆ ಹಲವರು ಇದ್ದರು.
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...