CRIMENEWSನಮ್ಮರಾಜ್ಯ

KKRTC ವೋಲ್ವೋ ಬಸ್‌ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್‌ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ ಚಾಲಕನ ಕಾಲು ಮುರಿದಿದ್ದು, ಓರ್ವ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬೈ ಪಾಸ್ ಬಳಿ ನಡೆಸಿದೆ.

ಟ್ರಕ್‌ – ವಿಜಯಪುರ ಘಟಕ-2ರ ವೋಲ್ವೋ ಬಸ್ಸಿನ ನಡುವೆ ಸಂಭವಿಸಿದ ಅಪಘಾತದಲ್ಲಿ  ಬಸ್‌ ಚಾಲಕ ಎಚ್‌.ಬಿ.ಬಬಲೇಶ್ವರ್ ಅವರ ಕಾಲಿಗೆ ಬಲವಾದ ಪೆಟ್ಟುಬಿದ್ದಿದೆ. ಅಲ್ಲದೆ ಪ್ರಯಾಣಿಕರೊಬ್ಬರು ಕೂಡ ಗಾಯಗೊಂಡಿದ್ದು ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ವೋಲ್ವೋ ಬಸ್‌ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇದು ಅಪಘಾತದ ತೀವ್ರತೆಯನ್ನು ಬಿಂಬಿಸುತ್ತಿದೆ.

ಈ ಅಪಘಾತದಿಂದ ಬಸ್‌ನ ಸ್ಟೇರಿಂಗ್‌ ಬೆಂಡಾಗಿದ್ದು, ಅದರಲ್ಲಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಈ ವೇಳೆ ಸಲಾಕೆಗಳನ್ನು ಬಳಸಿ ಸ್ಟೇರಿಂಗ್‌ನಲ್ಲಿ ಸಿಕ್ಕಿಕೊಂಡಿದ್ದ ಚಾಲಕನ ಕಾಲನ್ನು ಬಿಡಿಸಲಾಯಿತು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!