Please assign a menu to the primary menu location under menu

NEWSನಮ್ಮರಾಜ್ಯ

KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಶುಕ್ರವಾರ ನಡೆಯಬೇಕಿದ್ದ ಸಭೆಯನ್ನು ಸೋಮವಾರಕ್ಕೆ (ಡಿ.30) ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ನೌಕರರಿಗೆ ಅಗ್ರಿಮೆಂಟ್‌ ಮೂಲಕ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕ ಸಂಘದ ಮುಖಂಡ ಎಚ್.ವಿ.ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ಹಾಗೂ ನಿಗಮಗಳ ಎಂಡಿಗಳೊಂಡಿಗೆ ಡಿ.30ರಂದು ಮಾತುಕತೆ ನಡೆಸಲಾಗುತ್ತದೆ. ಆದರೆ, ಅಂದು ನಡೆಯುವ ಸಭೆಯಲ್ಲಿ ನೌಕರರ ಪರವಾದ ವಾದಕ್ಕೆ ಮಾನ್ಯತೆ ಸಿಗುವುದಿಲ್ಲ. ಹೀಗಾಗಿ ಮುಷ್ಕರ ಮಾಡುವುದು ಅನಿರ್ವಾಯವಾಗಲಿದೆ.

ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಲ್ಲ ಆದ್ದರಿಂದ ನಾವು ಮುಷ್ಕರ ಮಾಡುವುದು ಶತಸಿದ್ಧ. ನಾವು ಮುಷ್ಕರ ಮಾಡುತ್ತೇವೆ ಎಂದು ಸಚಿವರಿಗೆ ನೋಟಿಸ್​ ಕೊಟ್ಟಿದ್ದೇವೆ. ಸಾರಿಗೆ ಇಲಾಖೆ ನೌಕರರು ಸಹ ಮುಷ್ಕರಕ್ಕೆ ಸಿದ್ಧರಾಗಿದ್ದಾರೆ. ಮುಷ್ಕರಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದೆ.

ಸರ್ಕಾರ ನಮ್ಮನ್ನು ಕರೆದು ಚರ್ಚಿಸಲಿ ಎಂದು ನೋಟಿಸ್ ನೀಡಿದ್ದೇವೆ. ಆದರೆ, ಸರ್ಕಾರ ಈವರೆಗೆ ಯಾವುದೇ ‌ರೀತಿಯಲ್ಲಿ ಸ್ಪಂದಿಸಿಲ್ಲ. ಬದಲಿಗೆ ಮುಷ್ಕರ ಮಾಡಿದರೆ ಎಸ್ಮಾ ಜಾರಿ ಮಾಡುತ್ತೇವೆಂದು ಹೇಳಿದ್ದಾರೆ. ಈ ಹಿಂದೆ ಎಸ್ಮಾ ಜಾರಿ ಮಾಡಿದ್ದ ಸರ್ಕಾರ ಭಸ್ಮ ಆಗೋಗಿದೆ. ಸಿದ್ದರಾಮಯ್ಯ ಇಂತಹ ದುಸ್ಸಾಹಸಕ್ಕೆ ಕೈಹಾಕಲ್ಲ ಅಂದ್ಕೊಂಡಿದ್ದೇನೆ. ನಮ್ಮ ಬೇಡಿಕೆಗಳು ಈಡೇರಿಲ್ಲ ಹಾಗಾಗಿ ಮುಷ್ಕರ ಶತಸಿದ್ಧ. ಮುಷ್ಕರ ಮಾಡಿಸೋದು, ತಪ್ಪಿಸುವುದು ಸಿಎಂ ಕೈಯಲ್ಲಿದೆ ಎಂದು ತಿಳಿಸಿದ್ದಾರೆ.

2020 ರ ಜನವರಿ 1 ರಿಂದ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು. ಜನವರಿ 2024 ರಿಂದ ಹೊಸ ವೇತನ ಪರಿಷ್ಕರಣೆ ಹಾಗೂ ಇತರ ಬೇಡಿಕೆ ಇತ್ಯರ್ಥಪಡಿಸಬೇಕು. ನಿವೃತ್ತರಾದ ನೌಕರರಿಗೆ 2024ರ ಜೂನ್ 27ರ ಸುತ್ತೋಲೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಾರಿಗೆ ಸಂಸ್ಥೆಗಳಲ್ಲಿ ಮಾನ್ಯತೆಗಾಗಿ ತುರ್ತಾಗಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು.

ಕೆಎಸ್​ಆರ್​ಟಿಸಿಯಲ್ಲಿ ಜಾರಿಗೆ ತರುತ್ತಿರುವ ನಗದು ರಹಿತ ಆರೋಗ್ಯ ಚಿಕಿತ್ಸೆ ಯೋಜನೆಯನ್ನು ಏಕಕಾಲದಲ್ಲಿ 4 ನಿಗಮಗಳಲ್ಲಿ ಜಾರಿಗೆ ತರಬೇಕು. ಸಂಸ್ಥೆಯಲ್ಲಿ ವಿದ್ಯುತ್‌ ಚಾಲಿತ ಬಸ್ಸುಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಟ್ಟು, ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿ ನಿರ್ವಹಣೆ ಮಾಡಬೇಕು. ಹೊರ ಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿಯನ್ನು ಕೈಬಿಡಬೇಕು ಎಂಬುದು ಸಾರಿಗೆ ನೌಕರರ ಆಗ್ರಹವಾಗಿದೆ.

ಸರ್ಕಾರವು ಈಗಾಗಲೇ ನೌಕರರ ಸಮಸ್ಯೆ ಆಲಿಸುವುದಾಗಿ ತಿಳಿಸಿದ್ದು, ಮುಷ್ಕರ ಕರೆ ವಾಪಸ್ ಪಡೆಯುವಂತೆ ಮಾಡಲು ಇಂದು ಮತ್ತೊಮ್ಮೆ ಪ್ರಯತ್ನ ನಡೆಸಿತು. ಆದರೆ ಆ ಪ್ರಯತ್ನ ಫಲಿಸಿಲ್ಲ, ಹೀಗಾಗಿ ಡಿಸೆಂಬರ್ 31ರಿಂದ ಮುಷ್ಕರ ಮಾಡೇಮಾಡುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿ ಹಠ ಹಿಡಿದು ಕುಳಿತಿದೆ.

ಇತ್ತ ವರ್ಷಾಂತ್ಯವಾಗಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ. ಹೀಗಾಗಿ ನೌಕರರ ಮನವೊಲಿಸಲುವ ಪ್ರಯತ್ನ ಮಾಡಲಾಗುವುದು ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ, ಆ ಅಧಿಕಾರಿಗೆ ಈ ವೇತನ ಹೆಚ್ಚಳದ ಲಾಭ ದೊರೆಯುವುದಿಲ್ಲ.

ಇನ್ನು ಸಾರಿಗೆ ವಿಭಾಗೀಯ ಮಟ್ಟದ ಅಧಿಕಾರಿಗಳಿಗೂ ಈ ವೇತನ ಹೆಚ್ಚಳದ ಲಾಭ ಇರುವುದರಿಂದ ಅಧಿಕಾರಿಗಳು ಕೂಡ ಮುಷ್ಕರಕ್ಕೆ ಬರಬೇಕು ಇಲ್ಲದಿದ್ದರೆ ನೌಕರರು ಕೂಡ ಈ ಮುಷ್ಕರದಿಂದ ಹಿಂದೆ ಸರಿಯಲಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಸುದ್ದಿ ಹರಿದ್ದಾಡುತ್ತಿದೆ.

Leave a Reply

error: Content is protected !!
LATEST
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತ... ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್‌- ಚಾಲಕರಿ... KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್ 4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ