NEWSನಮ್ಮಜಿಲ್ಲೆನಮ್ಮರಾಜ್ಯ

ಅತೀ ಶೀಘ್ರದಲ್ಲೇ ಡಿಪೋ, ತಾಲೂಕು, ನಗರ ಕೇಂದ್ರಗಳಲ್ಲಿ ಸಾರಿಗೆ ನೌಕರರ ಹೋರಾಟ – ಸಿದ್ಧತೆಯಲ್ಲಿ ಸಮಾನ ಮನಸ್ಕರ ವೇದಿಕೆ

ನೌಕರರಿಗೆ ಸಾರಿಗೆ ಸಂಸ್ಥೆಗಳ ಕೆಲ ಅಧಿಕಾರಿಗಳಿಂದಲೂ ಸಾಥ್‌ l ಹೋರಾಟದ ರೂಪುರೇಷೆ ಬಗ್ಗೆಯೂ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಕಳೆದ ಮೂರು ವರ್ಷಗಳಿಂದ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳ ಆಡಳಿತ ಮಂಡಳಿಗೆ ನೂರಾರು ಮನವಿ ಪತ್ರಗಳನ್ನು ಸಲ್ಲಿಸಿದೆ.

ಆದರೆ, ಈವರೆಗೂ ಸರ್ಕಾರವಾಗಲಿ ಇಲ್ಲ ಆಡಳಿತ ಮಂಡಳಿಯಾಗಲೀ ಯಾವುದೇ ಸ್ಪಷ್ಟ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಹೀಗಾಗಿ ಕೂಟ ಮತ್ತು ಸಮಾನ ಮನಸ್ಕರ ವೇದಿಕೆ ವತಿಯಿಂದ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾಗುತ್ತಿದ್ದು, ಅದು ಸಾರಿಗೆ ನಾಲ್ಕೂ ನಿಗಮಗಳ ಎಲ್ಲ ಘಟಕ ಮಟ್ಟದಲ್ಲೂ ಜತೆಗೆ ತಾಲೂಕು ಮತ್ತು ನಗರ ಕೇಂದ್ರಗಳಲ್ಲೂ ನಡೆಸಲು ಅತೀ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹೋರಾಟ ಹೇಗಿರಲಿದೆ ಎಂಬುದರ ಬಗ್ಗೆ ಕೂಟದ ಪದಾಧಿಕಾರಿಗಳು ಮತ್ತು ಸಮಾನ ಮನಸ್ಕರ ವೇದಿಕೆಯ ಪ್ರಮುಖರು ಚರ್ಚೆ ನಡೆಸುತ್ತಿದ್ದು, ಎಲ್ಲರೂ ಸೇರಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈವರೆಗೂ ಸಾರಿಗೆ ಸಚಿವರು ಸೇರಿದಂತೆ ಸರ್ಕಾರದ ಬಹುತೇಕ ಎಲ್ಲ ಸಚಿವರಿಗೂ ಬೇಡಿಕೆ ಈಡೇರಿಸುವಂತೆ ಒತ್ತಾಯ ಮಾಡಿ ಮನವಿಗಳನ್ನು ಸಲ್ಲಿಸಲಾಗಿದೆ. ಅದರ ಜತೆಗೆ ನಾಲ್ಕೂ ನಿಗಮಗಳ ಎಂಡಿಗಳಿಗೂ ಮನವಿ ಮಾಡಲಾಗಿದೆ. ಆದರೆ ಈವರೆಗೂ ಪ್ರಮುಖ ಬೇಡಿಕೆಯಾದ ಸರಿ ಸಮಾನ ವೇತನದ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಹೀಗಾಗಿ ಡಿಪೋ ಮಟ್ಟದಲ್ಲಿ ಮತ್ತು ರಾಜ್ಯದ ಎಲ್ಲ ತಾಲೂಕು, ನಗರ ಕೇಂದ್ರ ಭಾಗಗಳಲ್ಲಿ ನೌಕರರು ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಕೂಟ ಮತ್ತು ಸಮಾನ ಮನಸ್ಕರ ವೇದಿಕೆಯಿಂದ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ನೌಕರರು ಕೂಡ ಸಮಾನ ಮನಸ್ಕರ ವೇದಿಕೆ ರೂಪಿಸಲು ಹೊರಟಿರುವ ಹೋರಾಟದ ಯೋಜನೆಗೆ ಬಹುತೇ ಸಾಥ್‌ ನೀಡಲು ಅವರೂ ಸಜ್ಜಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈವರೆಗೂ ಸರ್ಕಾರ, ಸಚಿವರು ಎಂಡಿಗಳು ಉನ್ನತ ಅಧಿಕಾರಿಗಳು, ಆಡಳಿತ ಮಂಡಳಿಗಳ ಅಧ್ಯಕ್ಷರ ಬಳಿಗೆ ಹೋಗಲು ಚಪ್ಪಲಿ ಸವೆಸಿ ಬೇಸತ್ತಿರುವ ನೌಕರರು ತಮ್ಮ ತಮ್ಮ ಡಿಪೋ ಮಟ್ಟದಲ್ಲೇ ಹೋರಾಟ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ.

ಇನ್ನು ಹೋರಾಟದಿಂದ ಮುಂದಿನ ದಿನಗಳಲ್ಲಿ ಸಮಸ್ತ ಸಾರಿಗೆ ನೌಕರರಿಗಷ್ಟೇ ಅಲ್ಲ ಅಧಿಕಾರಿಗಳಿಗೂ ಇದರ ಫಲ ಸಿಗಲಿದ್ದು ಅದರ ಪ್ರಯೋಜನ ಪಡೆದುಕೊಳ್ಳಲು ಕೆಲ ಅಧಿಕಾರಿಗಳು ಕೂಡ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಹೋರಾಟವು ಇದೇ 19 ರಿಂದ ಬೆಳಗಾವಿಯಲ್ಲಿ ಆರಂಭವಾಗುತ್ತಿರುವ ಚಳಿಗಾಲದ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಸಿದ್ದವಾಗಲಿದ್ದು, ಅಧಿವೇಶನದ ವೇಳೆಗೆ ಎಲ್ಲ ಡಿಪೋ ಮತ್ತು ತಾಲೂಕು ನಗರ ಕೇಂದ್ರಗಳಲ್ಲಿ ಹೇಗೆ ತೀವ್ರಗೊಳಿಸಬೇಕು  ಎಂಬುದರ ಬಗ್ಗೆಯೂ ಚರ್ಚೆ  ನಡೆಸಲಾಗುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ