CrimeNEWSನಮ್ಮಜಿಲ್ಲೆ

KSRTC: ಅಂಗವಿಕಲ ವ್ಯಕ್ತಿಗೆ ಸೀಟ್‌ಬಿಟ್ಟುಕೊಡಿ ಎಂದ ನಿರ್ವಾಹಕಿ ಮೇಲೆ ಯುವಕನಿಂದ ಹಲ್ಲೆ – ಬಂಧನ

ವಿಜಯಪಥ ಸಮಗ್ರ ಸುದ್ದಿ

ಪುತ್ತೂರು : ಅಂಗವಿಕಲ ವ್ಯಕ್ತಿಯೊಬ್ಬರಿಗೆ ಬಸ್‌ನಲ್ಲಿ ಸೀಟು ಬಿಟ್ಟುಕೊಡುವಂತೆ ಕೇಳಿದ್ದಕ್ಕೆ ಕುಪಿತಗೊಂಡ ಯುವಕ ನಿರ್ವಾಹಕಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕಿ ವಿಜಯಾ ಎಂಬುವರೆ ಹಲ್ಲೆಗೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಸಂಬಂಧ ವಿಜಯಾ ಅವರು ನೀಡಿದ ದೂರಿನ ಆಧಾರದ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಪುತ್ತೂರಿನಿಂದ ಮಂಗಳೂರಿಗೆ ಇದೇ ಫೆ.20ರಂದು ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಂಗವಿಕಲ ವ್ಯಕ್ತಿಯೊಬ್ಬರು ನಿಂತು ಪ್ರಯಾಣಿಸುತ್ತಿದ್ದರು. ಅದನ್ನು ಗಮನಿಸಿದ ನಿರ್ವಾಹಿಕಿ ವಿಜಯಾ ಅವರು ಯುವಕನ ಬಳಿ ಬಂದು ಸೀಟು ಬಿಟ್ಟು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಆತ ಆಕ್ಷೇಪಿಸಿದ್ದು ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಯುವಕ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಈ ವೇಳೆ ಹಲ್ಲೆಗೊಳಗಾದ ವಿಜಯಾ ಅವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಕಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು