KSRTC- ಉಪವಾಸ ಸತ್ಯಾಗ್ರಹ ನಿರತ ಮತ್ತೊಬ್ಬ ಸಾರಿಗೆ ಸಿಬ್ಬಂದಿ ಅಸ್ವಸ್ಥ ಆಸ್ಪತ್ರೆಗೆ ದಾಖಲು
ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಉಪವಾಸವಿದ್ದ ಸಾರಿಗೆಯ ಮಹಿಳಾ ಸಿಬ್ಬಂದಿಗಳಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಬೆನ್ನಲ್ಲೇ ಮತ್ತೊಬ್ಬ ನೌಕರ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಬಸವರಾಜು ಅಸ್ವಸ್ಥಗೊಂಡ ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ಸಿಬ್ಬಂದಿ. ಅಸ್ವಸ್ಥಗೊಂಡ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ.
ಇತ್ತ ಕಳೆದ ಡಿ.19ರಿಂದ ಉಪವಾಸ ಕುಳಿತಿರುವ ನೌಕರರಲ್ಲಿ ಇನ್ನು ಒಂದಿಬ್ಬರು ನೌಕರರ ಆರೋಗ್ಯದಲ್ಲೂ ಏರುಪೇರಾಗುತ್ತಿದೆ ಎಂದು ಪ್ರತಿಭಟನಾ ನಿರತ ನೌಕರರು ತಿಳಿಸಿದ್ದಾರೆ.
ಇನ್ನು ಡಿ.20ರಂದು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಅವರು ಮತ್ತೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ.
ಈ ನಡುವೆಯೇ ಇಂದು ಉಪವಾಸ ಸತ್ಯಾಗ್ರಹ ನಿರತ ಮತ್ತೊಬ್ಬ ನೌಕರರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೂ ಸರ್ಕಾರ ಈವರೆಗೂ ನೌಕರರ ಬೇಡಿಕೆ ಈಡೇರಿಸಲು ಮುಂದಾಗಿಲ್ಲ.
ಇಂದು ಅಸ್ವಸ್ಥಗೊಂಡ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಾರೆ ಎಂದು ನೌಕರರು ತಿಳಿಸಿದ್ದಾರೆ.
ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮೀನಮೇಷ ಎಣಿಸುತ್ತಿರುವುದರಿಂದ ನೂರಾರು ಕಿಲೋ ಮೀಟರ್‌ನಲ್ಲಿ ತಮ್ಮ ಸಂಸಾರವನ್ನು ಬಿಟ್ಟು ಹೋರಾಟಕ್ಕೆ ಧುಮುಕಿರುವ ಸಿಬ್ಬಂದಿ ಪ್ರಾಣದ ಹಂಗುತೊರೆದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
You Might Also Like
ನಾನು ಕಾದು ಕುಳಿತಿದ್ದರೂ ಬಸ್ ನಿಲ್ಲಿಸಿಲ್ಲ – ಚಾಲಕ, ಕಂಡಕ್ಟರ್ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ...
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೇಡಿಕೆಗೆ ಮಣಿದಿರುವ ಸಹಕಾರ ಇಲಾಖೆಯು ಏಳನೇ ವೇತನ ಆಯೋಗದ ವರದಿ ಪ್ರಕಾರ...
KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್
ನ್ಯೂಡೆಲ್ಲಿ: ಬಸ್ ಕಾರ್ಯಾಚರಣೆಗಳ ಮೇಲಿನ KSRTCಯ ಏಕಸ್ವಾಮ್ಯವನ್ನು ಕಿತ್ತು ಹಾಕಿ, ಕರ್ನಾಟಕ ಸರ್ಕಾರ 2003ರಲ್ಲಿ ಜಾರಿಗೆ ತಂದಿದ್ದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಸಂಬಂಧ...
ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ
ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ “ಸ್ಮಶಾನಕ್ಕೆಂದು ಮೀಸಲಿಟ್ಟಿರುವ ಸರ್ಕಾರಿ ಸ್ವತ್ತನ್ನು ಪ್ರಭಾವೀ ವ್ಯಕ್ತಿಯೊಬ್ಬರ ಖಾಸಗಿ ಬಡಾವಣೆಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಸರ್ಕಾರಿ ಅಧಿಕಾರಿ...
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್
ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್...
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್ ಬರೆ ಗ್ಯಾರಂಟಿ
ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ದಾರಿಯನ್ನು ಬಿಡದಿಯಿಂದ ಮುಂದೆ ಬುಧವಾರದಿಂದ ದಿಢೀರ್ ಮುಚ್ಚಿದ್ದು ಇದರಿಂದ ಸರ್ವಿಸ್ ರಸ್ತೆಗೆ ಹೋಗಬಹುದೆಂದು ಬರುವ ವಾಹನಗಳ ಸವಾರರು...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು
ಬಿಡದಿ: ಬೆಂಗಳೂರಿನಿಂದ ರಾಮನಗರಕ್ಕೆ ಹೊತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ಬಿಡದಿ ಸಂಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು...
KSRTC ಕನಕಪುರ ಬಸ್ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್ ಆರೋಪ
ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನಕಪುರ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಸಂಚಾರ ನಿಯಂತ್ರಕರಾಗಿರುವ ಗೋಪಾಲಯ್ಯ ನಿರ್ವಾಹಕರಿಂದ 10-10 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇದು ವಿಡಿಯೋದಲ್ಲಿ...
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ
ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...