VIJAYAPATHA.IN > ವಿಜಯಪಥ > NEWS > Crime > KSRTC ನೌಕರ ಮಲ್ಲಿಕಾರ್ಜುನ ಬಡಿಗೇರ ಡಿಪೋ ಆವರಣದಲ್ಲೇ ಆತ್ಮಹತ್ಯೆಗೆ ಶರಣು
KSRTC ನೌಕರ ಮಲ್ಲಿಕಾರ್ಜುನ ಬಡಿಗೇರ ಡಿಪೋ ಆವರಣದಲ್ಲೇ ಆತ್ಮಹತ್ಯೆಗೆ ಶರಣು
PruthvirajJuly 3, 2023
ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಜಿಲ್ಲೆ ರಾಣೇಬೆನ್ನೂರಿನ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಚಾಲಕ ಕಂ ನಿರ್ವಾಹಕ ಮಲ್ಲಿಕಾರ್ಜುನ ಬಡಿಗೇರ (49) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಹತ್ತು ವರ್ಷದಿಂದ ರಾಣೇಬೆನ್ನೂರು ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ಒಂದು ವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎನ್ನಲಾಗಿದೆ.
ಆದರೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಲಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Related
Pruthviraj
Leave a reply