NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೆಂಗಳೂರು-ಮೈಸೂರು ಸೇರಿದಂತೆ 6 ನಗರಗಳ ನಡುವೆ ಐಷಾರಾಮಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏರಿಕೆಯಾಗುತ್ತಿರುವ ಡೀಸೆಲ್ ದರಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಸಾರಿಗೆ ಸಂಸ್ಥೆ ಈ ಹೊತ್ತಿನಲ್ಲಿ ಮೈಸೂರು, ಮಡಿಕೇರಿ ಸೇರಿದಂತೆ ರಾಜ್ಯದ ಆರು ಪ್ರಮುಖ ನಗರಗಳ ನಡುವೆ ಕೆಎಸ್‌ಆರ್‌ಟಿಸಿಯ 50 ಐಷಾರಾಮಿ ಎಲೆಕ್ಟ್ರಿಕ್ ಬಸ್‌ಗಳನ್ನು (ಇ- ವಾಹನಗಳು) ಓಡಿಸಲು ಸಿದ್ಧತೆ ಮಾಡಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಇಂದು (ಡಿ.31) ಶಾಂತಿನಗರದ ಕೇಂದ್ರ ಕಚೇರಿ ಬಳಿ ನೂತನ ಎಲೆಕ್ಟ್ರಿಕ್ ಬಸ್‌ ಒಂದಕ್ಕೆ ಸಾಂಕೇತಿಕವಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ತಲಾ 43 ಆಸನಗಳಿರುವ 50 ಸಂಪೂರ್ಣ ಹವಾ ನಿಯಂತ್ರಿತ ಇ-ಬಸ್‌ಗಳು ರಸ್ತೆಗಿಳಿಯಲು ಸಿದ್ಧಗೊಂಡಿದ್ದು, ಬೆಂಗಳೂರು – ಮೈಸೂರು – ಮಡಿಕೇರಿ – ವಿರಾಜಪೇಟೆ – ಚಿಕ್ಕಮಗಳೂರು – ದಾವಣಗೆರೆ ಮತ್ತು ಶಿವಮೊಗ್ಗ ನಗರಗಳ ನಡುವೆ ಇಂಟರ್ ಸಿಟಿ ಮಾರ್ಗಗಳಲ್ಲಿ ಸಂಚಾರಕ್ಕೆ ಮುಕ್ತವಾಗಿವೆ ಎಂದು ತಿಳಿಸಿದರು.

ಹನ್ನೆರಡು ಮೀಟರ್ ಉದ್ದದ ಈ ಬಸ್‌ಗಳ ಎಲೆಕ್ಟ್ರಿಕ್ ಬ್ಯಾಟರಿಯನ್ನು ಒಮ್ಮೆ ಚಾರ್ಚ್ ಮಾಡಿದರೆ 250 ರಿಂದ 300 ಕಿ.ಮೀ.ವರೆಗೆ ಚಲಿಸುತ್ತವೆ. ಹೈದರಾಬಾದ್ ಮೂಲದ ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (ಒಜಿಎಲ್) ಇದರ ನಿರ್ವಹಣೆಗಾಗಿ ಕೆಎಸ್‌ಆರ್‌ಟಿಸಿಯಿಂದ 12 ವರ್ಷಗಳ ಗುತ್ತಿಗೆ ಪಡೆದಿದೆ.

ರಾಜ್ಯ ಸಾರಿಗೆ ಸಂಸ್ಥೆಗೆ ಈಗ ಸುಮಾರು 88 ರೂ.ಗಳಿಗೆ ಡೀಸೆಲ್ ಲಭಿಸುತ್ತಿದೆ. ಹೈಟೆಕ್ ವೋಲ್ವೊ ಬಸ್‌ಗಳ ಕಾರ್ಯನಿರ್ವಹಣಾ ವೆಚ್ಚ ಪ್ರತಿ ಕಿ.ಮೀ.ಗೆ 52 ರೂ.ಗಳಾಗಿದೆ. ಇನ್ನು ಡಿಸೇಲ್ ದರ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಕೆಎಸ್‌ಆರ್‌ಟಿಸಿ ಸಂಸ್ಥೆ ಸಂಕಷ್ಟಕ್ಕೆ ಸಿಲುಕಿದೆ.

ಹೀಗಾಗಿ ಪ್ರಸ್ತುತ ಸಂಸ್ಥೆಗೆ ವೆಚ್ಚ ಕಡಿವಾಣದ ತುರ್ತು ಅಗತ್ಯವಿದೆ. ಈ ಸಂದರ್ಭದಲ್ಲಿ ಎಲೆಕ್ಟ್ರಿಕ್ ಬಸ್‌ಗಳು ನೆರವಾಗುತ್ತವೆ. ದೀರ್ಘ ಅಂತರದ ಸಂಚಾರಕ್ಕೆ ವಿದ್ಯುತ್ ಬಸ್‌ಗಳನ್ನು ಓಡಿಸುವುದು ಲಾಭದಾಯಕ ಎಂದು ಶ್ರೀರಾಮುಲು ವಿವರಿಸಿದರು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌, ನಿರ್ದೇಶಕರಾದ (ಪರಿಸರ ಮತ್ತು ಜಾಗೃತಾ) ಡಾ.ನವೀನ್ ಭಟ್, ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ನೌಕರರು ಇದ್ದರು.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ