ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕುಂತ್ತೂರು ಬಳಿ ನಡೆದಿದೆ.
ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಚಾಮರಾಜನಗರ ಡಿಪೋ ಬಸ್ ಕೊಳ್ಳೇಗಾಲದಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ನಡುವೆ ಈ ಅವಘಡ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾವರಿಗೆ ಸಣ್ಣಪಟ್ಟ ಗಾಯಗಳಾಗಿದ್ದು ಅವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ವೇಳೆ ಬಸ್ ಬ್ರೇಕ್ ಹಾಕಿದ್ದರಿಂದ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದ ರಭಸಕ್ಕೆ ಕಾರು ಪಲ್ಟಿ ಹೊಡೆದು ರಸ್ತೆಯಲ್ಲೇ ಉರುಳಿ ಬಿದ್ದಿತು. ಇನ್ನು ಇತ್ತೀಚೆಗಷ್ಟೇ ಬಸ್‌ಅನ್ನು ಚಾಮರಾಜನಗರ ಡಿಪೋದಲ್ಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಿದ್ದಗೊಳಿಸಲಾಗಿತ್ತು. ಆದರೆ ಇಂದು ಅಪಘಾತಕ್ಕೀಡಾಗಿದ್ದು ಈ ಬಸ್ ಚಾಲಕ ಗುತ್ತಿಗೆ ಆಧಾರ ಮೇಲೆ ನೇಮಕಗೊಂಡವರಾಗಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)