KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ ಎಂದು ರಾಜ್ಯ ಬಿಜೆಪಿ ಮಾಡಿದ xಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್ಆರ್ಟಿಸಿಗೆ – ರೂ.2481 ಕೋಟಿ, ಬಿಎಂಟಿಸಿಗೆ – ರೂ. 1126 ಕೋಟಿ, ವಾಯುವ್ಯ ಸಾರಿಗೆಗೆ – ರೂ 1613 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ- 1321 ಕೋಟಿ ರೂ. ಅನುದಾನ, ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ರೂ 6543 ಕೋಟಿ ಅನುದಾನವನ್ನು ಸರ್ಕಾರ 2023ರ ಜೂನ್ನಿಂದ 2024ರ ನವೆಂಬರ್ವರೆಗೆ ಬಿಡುಗಡೆ ಮಾಡಿದೆ.
ಈವರೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ನಮಗೆ ರೂ.414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ ಎಂದು ಬಿಜೆಪಿಗೆ ಸವಾಲಿನ ಪ್ರಶ್ನೆ ಹಾಕಿದ್ದಾರೆ.
ತಮ್ಮ ಬಿಜೆಪಿ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ, ಖರೀದಿ ಸಾಮಗ್ರಿಗಳ ಹಣ ಸೇರಿ ಎಲ್ಲ ಬಾಕಿಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಇದು ನಿಮಗೆ ಗೊತ್ತಿಲ್ಲದ ವಿಷಯವೇನು ಅಲ್ಲ ಎಂದು ಹೇಳಿದ್ದಾರೆ.
ಇನ್ನು 2023 ಮಾರ್ಚ್ ನಲ್ಲಿ , 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಕೆ ಬೇಕಾದ ಅನುದಾನವನ್ನು ನೀಡದೆ, ನಿವೃತ್ತಿ ಹೊಂದಿದ 11,694 ಸಿಬ್ಬಂದಿಗಳಿಗೆ ತಮ್ಮ ಕಾಲದ ಉಪಧನ ಮತ್ತು ಗಳಿಕೆ ರಜೆ ಬಾಕಿ ಹಣ ರೂ. 224.05 ಕೋಟಿ ನಾವು ಎರಡು ದಿನದ ಹಿಂದೆ ಪಾವತಿಸಿದ್ದೇವೆ ಎಂದು ತಿವಿದಿದ್ದಾರೆ.
ಅಲ್ಲದೆ ತಮ್ಮ ದುರಾಡಳಿತಕ್ಕೆ ಇದಕ್ಕಿಂತ ಬೇರೆ ಕೈಗನ್ನಡಿಯ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿದರು ರಾಮಲಿಂಗಾರೆಡ್ಡಿ, ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ, ಶೂನ್ಯ ಅಭಿವೃದ್ಧಿ ಕಾರ್ಯ, ಶೂನ್ಯ ಸಾಧನೆಗೆ ಹಾಗೂ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದ ತಮ್ಮ ಸರ್ಕಾರಕ್ಕೆ ನಮ್ಮ ಧಿಕ್ಕಾರ ಎಂದು ಹೇಳಿದ್ದಾರೆ.
ಮಾನ್ಯ ಸಾರಿಗೆ ಸಚಿವರು ನೀವು ನೀಡಿದ ಅಂಕಿ ಅಂಶಗಳೆಲ್ಲವೂ ನಿಜವಾಗಿದ್ದು, ಹಿಂದಿನ ಬಿಜೆಪಿ ಸರ್ಕಾರವು ಸಾರಿಗೆ ನೌಕರರಿಗೆ ಮಾಡಿದ ಮಹಾ ಮೋಸದಿಂದ ನಮ್ಮನ್ನು ಹೊರಗೆ ತಂದಿದ್ದೀರಿ. ಅದಕ್ಕಾಗಿಯೇ ಬಹುತೇಕ ಸಾರಿಗೆ ನೌಕರರು ನಿಮಗೆ ಓಟು ಹಾಕಿದ್ದು, ಇನ್ನು ನಿಮ್ಮ ಪ್ರಣಾಳಿಕೆಯಲ್ಲಿನ ಸರಿಸಮಾನ ವೇತನವನ್ನು ತಪ್ಪದೆ ಜಾರಿಗೆ ತನ್ನಿ ಬೇರೇನೂ ಬೇಡ, ನಾವು ಯಾರೂ ಮುಷ್ಕರಕ್ಕೆ ಬೆಂಬಲ ಕೊಡುವುದಿಲ್ಲ