Please assign a menu to the primary menu location under menu

NEWSನಮ್ಮರಾಜ್ಯ

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ: ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಮುಗಿದ ಬಳಿಕ ಚಿಕ್ಕಮಗಳೂರು ಹೊರವಲಯದಲ್ಲಿರುವ ಸೆರಾಯ್‌ ರೆಸಾರ್ಟ್‌ಗೆ ತಮ್ಮ ಕುಟುಂಬದ ಸದಸ್ಯರ ಜತೆ ಇಂದು ಬೆಳಗ್ಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯವ್ಯಾಪಿ ಪೆನ್‌ಡ್ರೈವ್‌ ಹಂಚಿದ್ದು ಶಿವಕುಮಾರ್‌ ಮತ್ತು ತಂಡ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ (ಟಿವಿಯವರು). ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲ ಎಲ್ಲ ಇವರೇ ಎಂದು ಕಿಡಿಕಾರಿದರು.

ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ. ಅಧಿಕಾರಿಗಳನ್ನು, ರಾಜಕಾರಣಿಗಳನ್ನು ಹೆದರಿಸುವುದೇ ಇವರ ಕೆಲಸ. ಕುಮಾರಸ್ವಾಮಿ ಕಿಂಗ್‌ ಆಫ್‌ ಬ್ಲಾಕ್‌ಮೇಲ್‌. ಚರ್ಚೆ ಮಾಡಲು ಸದನ ಇದೆ. ಎಲ್ಲವನ್ನೂ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಹೇಳಿದರು.

ಅವರದ್ದೇ ಬೇರೆ ಫ್ಯಾಮಿಲಿ ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರಿದುಕೊಳ್ಳುತ್ತಿದ್ದಾರೆ. ಇವರು ಲಾಯರಾ? ಜಡ್ಜಾ? ಹೋಗಿ ವಾದ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ರೆಸಾರ್ಟ್‌ನಲ್ಲಿ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ, ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತಗೌಡ ಮತ್ತು ಜಿಲ್ಲಾ ಘಟಕದ ಪ್ರಮುಖ ಮುಖಂಡರ ಜತೆ ಉಪಾಹಾರ ಸೇವಿಸಿದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್