ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದತಿಗೆ ಮುಂದಾಗಿ: ನೂತನ ಸಿಎಂಗೆ ಕುರುಬೂರು ಶಾಂತಕುಮಾರ್ ಒತ್ತಾಯ
ಚುನಾವಣೆಯಲ್ಲಿ ಭರವಸೆ ನೀಡಿದಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ಮುಂಗಾರು ಆರಂಭ ಆಗಿದೆ ರೈತರಿಗೆ ಬೇಕಾದ ರಸಗೊಬ್ಬರ ಬೀಜ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು -ಕುರುಬೂರು ಶಾಂತಕುಮಾರ್

ಬೆಂಗಳೂರು: ರಾಜ್ಯದ ರೈತರ ಮುಂದಿನ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ತಿಳಿಸಿ ದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಬೆಂಗಳೂರು ಸುತ್ತಮುತ್ತಲ ಐದು ಜಿಲ್ಲೆಗಳ ಯೋಜನೆ ಕಾರ್ಯಗತವಾಗಬೇಕು ಎಂದ ಹೇಳಿದರು.
ಇನ್ನು ರೈತರಿಗೆ ನೀಡುತ್ತಿದ್ದ ಪ್ರೋತ್ಸಾಹಧನ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿರಬೇಕು. 40 ಲಕ್ಷ ಕೃಷಿ ಪಂಪ್ ಸೆಟ್ ರೈತರಿಗೆ ಮಾರಕವಾಗುವ ವಿದ್ಯುತ್ ಖಾಸಗೀಕರಣ ನಿಲ್ಲಬೇಕು. ಒರಿಸ್ಸಾದಲ್ಲಿ ಖಾಸಗೀಕರಣ ಮಾಡಿ ವಿಫಲರಾಗಿದ್ದಾರೆ. ಆರೀತಿ ಇಲ್ಲಿ ಆಗುವುದು ಬೇಡ ಎಂದರು.
ಚುನಾವಣೆಯಲ್ಲಿ ಭರವಸೆ ನೀಡಿದಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ಮುಂಗಾರು ಆರಂಭ ಆಗಿದೆ ರೈತರಿಗೆ ಬೇಕಾದ ರಸಗೊಬ್ಬರ ಬೀಜ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ 1,500 ಕೋಟಿ ರೂ. ಕಬ್ಬಿನ ಹಣ ಬಾಕಿ ಉಳಿದಿದೆ ಕೂಡಲೇ ರೈತರಿಗೆ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Related









