NEWSನಮ್ಮಜಿಲ್ಲೆಸಂಸ್ಕೃತಿ

ಕನ್ನಡದ ಕಂಪು ಜಗತ್ತಿಗೆ ಪಸರಿಸಿದ ಕವಿ ಕುವೆಂಪು: ಎಡಿಸಿ ಸೈಯಿದಾ ಆಯಿಷಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸಾಹಿತಿ, ಸಮಾಜ ಸುಧಾರಕ, ದಾರ್ಶನಿಕ ಕವಿ ಕುವೆಂಪು ಅವರು ಕನ್ನಡದ ಕಂಪನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಅವರ ಸಾಹಿತ್ಯ ನಮಗೆ ಸದಾ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಕುವೆಂಪು ಅವರ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ ರಾಷ್ಟ್ರದಾದ್ಯಂತ ಸಾಹಿತ್ಯ ಪಸರಿಸಿದೆ. ಕನ್ನಡ ಸಾಹಿತ್ಯಕ್ಕೆ, ಸಮಾಜ ಸುಧಾರಣೆಗೆ, ಜಾತ್ಯತೀತ ವ್ಯವಸ್ಥೆಗೆ ಅವರ ಕೊಡುಗೆ ಅಪಾರವಾದದ್ದು. ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಓದಬೇಕು,ಅವರ ಕಾವ್ಯಗಳಲ್ಲಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ಜಿಲ್ಲಾಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!