NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮುಷ್ಕರ ಸಂಬಂಧ ಜು.28ರಂದು ರಾಜೀಸಂಧಾನ ಸಭೆ ಕರೆದ ಆಯಕ್ತರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಹಾಗೂ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಯಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರು ರಾಜೀ ಸಂಧಾನ ಸಭೆ ಕರೆದಿದ್ದಾರೆ.

ಈ ಸಂಬಂಧ ಇದೇ ಜುಲೈ 18ರಂದು ರಾಜೀ ಸಂಧಾನ ಸಭೆಯ ಸೂಚನಾ ಪತ್ರ ಹೊರಡಿಸಿದ್ದು, ಜುಲೈ 28ರ ಬೆಳಗ್ಗೆ 11.30ಕ್ಕೆ ಸಂಧಾನ ಸಭೆಗೆ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರು ಹಾಜರಾಗುವಂತೆ ತಿಳಿಸಿದ್ದಾರೆ.

KSRTC, BMTC, NWKRTC ಹಾಗೂ KKRTC ಆಡಳಿತವರ್ಗದ ವ್ಯವಸ್ಥಾಪಕರು 05.08.2025 ಬಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅವರು 16.07.2025 ರಂದು ಮುಷ್ಕರ ನೋಟಿಸ್ ನೀಡಿರುವ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾಲ್ಕೂ ನಿಗಮಗಳ ಆಡಳಿತವರ್ಗದ ವ್ಯವಸ್ಥಾಪಕ ನಿರ್ದೇಶಕರು ಈ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿರುವ ಪತ್ರವನ್ನು ಮುಖ್ಯ ಮಂತ್ರಿಯವರು ಹಾಗೂ ಆಡಳಿತವರ್ಗಕ್ಕೆ ಜಂಟಿ ಕ್ರಿಯಾ ಸಮಿತಿ ಅವರು ಮುಷ್ಕರ ನೋಟಿಸ್ ನೀಡಿರುವುದಾಗಿ ತಿಳಿಸುತ್ತಾ, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು KSRTC ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.

ಹೀಗಾಗಿ ಕಾರ್ಮಿಕ ಸಂಘದವರು, ಮುಷ್ಕರದ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರ ನಡುವೆ ಕೈಗಾರಿಕಾ ವಿವಾದ ಉದ್ಭವಿಸಿದೆ ಎಂದು ಪರಿಗಣಿಸಿ. ಈ ಸಂಬಂಧ ಮಧ್ಯೆ ಪ್ರವೇಶಿಸುವುದು ಅವಶ್ಯವೆಂದು ಭಾವಿಸಿ, ಆಯುಕ್ತರ ಕಚೇರಿ, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಡೈರಿ ವೃತ್ತದ ಹತ್ತಿರ, ಬನ್ನೇರುಘಟ್ಟ ರಸ್ತೆಯಲ್ಲಿ 28.07.2025 ರಂದು ಬೆಳಗ್ಗೆ 11.30 ಗಂಟೆಗೆ ಸಂಧಾನ ಸಭೆಯನ್ನು ನಿಗದಿಪಡಿಸಿದೆ.

ಈ ಸಂಧಾನ ಸಭೆಗೆ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರು ಅವಶ್ಯಕ ದಾಖಲಾತಿಗಳೊಂದಿಗೆ ತಪ್ಪದೆ ಹಾಜರಾಗಬೇಕು ಎಂದು ಈ ಮೂಲಕ ಸೂಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!