NEWSಕೃಷಿನಮ್ಮರಾಜ್ಯ

ಕೇವಲ ಏಳು ದಿನದಲ್ಲೇ ಭೂ ಪರಿವರ್ತನೆ – ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕೃಷಿಯೇತರ ಉದ್ದೇಶಗಳಿಗೆ ಕೃಷಿ ಜಮೀನನ್ನು ಪರಿವರ್ತಿಸುವ ಪ್ರಕ್ರಿಯೆ ಸರಳಗೊಳಿಸುವ ಮೂಲಕ ವಿಳಂಬ ತಪ್ಪಿಸುವ ಸಲುವಾಗಿ ತಂದಿರುವ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022’ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ಎಚ್.ಕೆ.ಪಾಟೀಲ್, ಆರ್.ರಮೇಶ್‍ಕುಮಾರ್, ಶಿವಲಿಂಗೇಗೌಡ, ಅರವಿಂದ ಲಿಂಬಾವಳಿ ಸೇರಿದಂತೆ ಇನ್ನಿತರ ಕೆಲ ಸದಸ್ಯರ ಸಲಹೆ ಒಪ್ಪಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಯಿತು.

ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಇದು ಕೇವಲ ಯೋಜನಾ ಪ್ರಾಧಿಕಾರ ಹೊಂದಿರುವ ಪ್ರದೇಶಗಳಿಗೆ ಅನ್ವಯವಾಗಲಿದ್ದು, ಉಳಿದಂತೆ ಗ್ರಾಮೀಣ ಪ್ರದೇಶದಲ್ಲಿ ಒಂದು ತಿಂಗಳಿನ ಅವಧಿ ಮುಂದುವರಿಯಲಿದೆ ಎಂದು ಹೇಳಿದರು.

ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ ಅರ್ಹ ದಾಖಲೆ ಸಮೇತ ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಭೂ ಪರಿವರ್ತನಾ ಆದೇಶವಾಗದಿದ್ದರೆ ಅದು ತನ್ನಿಂದ ತಾನೇ (ಡೀಮ್ಡ್) ಭೂ ಪರಿವರ್ತನೆ ಆಗಿದೆ ಎಂದು ಭಾವಿಸಬೇಕಾಗುತ್ತದೆ ಅದಕ್ಕೆ ಈ ವಿಧೇಯಕ ಅವಕಾಶ ಕಲ್ಪಿಸಲಾಗಿದೆ ಎಂದು ಅಶೋಕ್‌ ವಿವರಿಸಿದರು.

ಭೂಪರಿವರ್ತನೆಗೆ ಯೋಜನಾ ಪ್ರದೇಶಗಳ ವ್ಯಾಪ್ತಿಯಲ್ಲಿ 7 ದಿನಗಳ ಕಾಲಾವಕಾಶ ಹಾಗೂ ಗ್ರಾಮೀಣ ಭಾಗದಲ್ಲಿ 30 ದಿನಗಳ ಕಾಲಾವಕಾಶ ನಿಗದಿ ಮಾಡಲಾಗಿದೆ. ಮಸೂದೆಯನ್ನು ಪಕ್ಷಭೇದವಿಲ್ಲದೆ ಸದಸ್ಯರು ಸ್ವಾಗತಿಸಿದರು. ಜತೆಗೆ ಕೆಲವು ಸಲಹೆಗಳನ್ನೂ ನೀಡಿದರು. ಕಾಯಿದೆಗೆ ನಿಯಮಾವಳಿಗಳ ರಚನೆ ಸಂದರ್ಭದಲ್ಲಿ ಈ ಸಲಹೆಗಳನ್ನು ಪರಿಗಣಿಸುವುದಾಗಿ ಸಚಿವರು ಭರವಸೆ ನೀಡಿದರು.

ಇನ್ನು ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್