Vijayapatha – ವಿಜಯಪಥ
Friday, November 1, 2024
CrimeNEWSಸಿನಿಪಥ

ನಿವೇಶನ ಖರೀದಿ ಅವ್ಯವಹಾರ: ನಟ ಮಾಸ್ಟರ್ ಆನಂದ್‌ಗೆ 18.50 ಲಕ್ಷ ವಚನೆ – FIR

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ರೂ. ಮುಂಗಡ ಪಡೆದು ವಂಚಿಸಿದ ಆರೋಪಮೇರೆಗೆ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

2020ರ ಸೆಪ್ಟಂಬರ್‌ನಿಂದ 2021 ರ ಅಕ್ಟೋಬರ್‌ನ ಅವಧಿಯಲ್ಲಾದ ವಂಚನೆಗೆ ಸಂಬಂಧಿಸಿದಂತೆ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ವಿರುದ್ಧ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ಆನಂದ್ ಶೂಟಿಂಗ್‌ಗಾಗಿ ತೆರಳಿದ್ದ ವೇಳೆ ನಿವೇಶನಗಳನ್ನು ನೋಡಿದ್ದರು. ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ತೋರಿಸಿದೆ. 70 ಲಕ್ಷ ರೂ.ಗಳಿಗೆ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.50 ಲಕ್ಷ ರೂ.ಗಳನ್ನು ಮುಂಗಡವಾಗಿ ಕಂಪನಿಗೆ ನೀಡಿದ್ದರು.

ಅದರಂತೆ ಕಂಪನಿಯು ಮಾಸ್ಟರ್ ಆನಂದ್ ಹಾಗೂ ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನು ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನ ಕಂಪನಿ ಬೇರೆಯವರಿಗೆ ಮಾರಾಟ ಮಾಡಿದ್ದು, ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ಸಹ ವಾಪಸ್ ಮಾಡದೆ ಕಡೆಗಣಿಸಿದೆ.

ಇನ್ನು ಈ ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದು, ಬಿಯುಡಿಎಸ್ ಕಾಯ್ದೆ (ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) 2019ರ ಅಡಿ ಆರೋಪಿಗಳ ವಿರುದ್ದ ಎಫ್‌ಐಆರ್ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...