CrimeNEWSನಮ್ಮಜಿಲ್ಲೆ

ತಡರಾತ್ರಿ ಮನೆಗಳ ಸರಣಿಗಳ್ಳತನ: ಹಣ, ಚಿನ್ನಾಭರಣ ಎಗರಿಸಿ ಖದೀಮರು ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಹುಕ್ಕೇರಿ ತಾಲೂಕಿನ ನರಸಿನಂಗಪೂರ ಗ್ರಾಮದಲ್ಲಿ ರಾತ್ರಿ ವೇಳೆ 6ಕ್ಕೂ ಹೆಚ್ಚು ಮನೆಗಳಲ್ಲಿ ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದು, ಇದರಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನರಸಿಂಗಪೂರ ಗ್ರಾಮ ಹೊಂದಿಕೊಂಡಿದೆ. ಈ ಗ್ರಾಮದಲ್ಲಿನ ಅಂಬೇಡ್ಕರ್​ ಗಲ್ಲಿ ಹಾಗೂ ಪಾಟೀಲ ಗಲ್ಲಿಯಲ್ಲಿ ತಡರಾತ್ರಿ ಕಳ್ಳರು ಕೈಚಳಕ ತೋರಿಸಿದ್ದಾರೆ.

ಯಾರು ಇಲ್ಲದ ಮನೆಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು ಮೊದಲೇ ಪ್ಲಾನ್ ರೂಪಿಸಿ 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ನುಗ್ಗಿ ಹಣ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಅಲ್ಲದೇ ಕೈಗೆ ಸಿಕ್ಕ ಬೆಲೆಬಾಳುವ ವಸ್ತುಗಳನ್ನು ಹೊತ್ತೋಯ್ದಿದ್ದಾರೆ.

ಹಣ ಆಭರಣಗಳನ್ನು ಕಳೆದುಕೊಂಡಿರುವ ಮನೆಯ ಮಾಲೀಕರು ಈಗ ಕಂಗಲಾಗಿದ್ದು ಜೀವನಕ್ಕೆ ಆಧಾರವಾಗಲಿ ಎಂದು ತೆಗೆದಿಟ್ಟಿದ್ದ ಎಲ್ಲ ವಸ್ತುಗಳನ್ನು ಕದೀಮರು ಕಳವು ಮಾಡಿ ನಮ್ಮ ಜೀವನವನ್ನು ನರಕವಾಗಿಸಿದ್ದಾರೆ ಎಂದು ಗೋಳಾಡುತ್ತಿದ್ದಾರೆ.

ಇನ್ನು ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಖದೀಮರ ಪತ್ತೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ