ಸರ್ಕಾರಿ ನೌಕರರ ಸೌಲಭ್ಯ ಸಾರಿಗೆ ನೌಕರರಿಗೂ ಕೊಡಿ: ಇಂದು ಹೈ ಕೋರ್ಟ್ ಮೆಟ್ಟಿಲೇರಿದ ವಕೀಲ ಶಿವರಾಜು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರಬೇಕಿರುವ ವೇತನ ಪರಿಷ್ಕರಣೆ 14ತಿಂಗಳಗಳು ಕಳೆದರೂ ಮಾಡಿದಿರುವ ಸರ್ಕಾರದ ವಿರುದ್ಧ ಇಂದು (ಮಾ.10) ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಕೀಲ ಎಚ್.ಬಿ.ಶಿವರಾಜು ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ನೌಕರರ ಸರಿ ಸಮಾನ ವೇತನ ಕೊಡಿಸಲು ಶ್ರಮಿಸುತ್ತಿದ್ದಾರೆ.
ಈ ಬಗ್ಗೆ ಕಳೆದ ಫೆ.27ರಂದೆ ವಿಜಯಪಥಕ್ಕೆ ತಿಳಿಸಿದ್ದ ಅವರು, ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆಯನ್ನು ಇನ್ನೂ ಮಾಡಿಲ್ಲ. ಹೀಗಾಗಿ ಸರ್ಕಾರ ಮಾರ್ಚ್ 7ರಂದು ಮಂಡಿಸುವ 2025-26ನೇ ಸಾಲಿನ ಬಜೆಟ್‌ನಲ್ಲಿ ನೌಕರರಿಗೆ ಸಿಹಿ ಸುದ್ದಿ ಕೊಡದಿದ್ದರೆ ಹೈಕೋರ್ಟ್‌ನಲ್ಲಿ ಪಿಟಿಶನ್ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು. ಅದಂತೆ ಇಂದು 10 ಮಂದಿ ನೌಕರರ ಸಹಿಯೊಂದಿಗೆ ಪಿಟಿಶನ್ ಫೈಲ್ ಮಾಡಿದ್ದಾರೆ.
ಈ ಮುಲಕ ಸಾರಿಗೆ ನೌಕರರ ಬಹು ವರ್ಷದ ಸರಿ ಸಮಾನ ವೇತನದ ಕನಸ್ಸು ಈ ಮೂಲಕ ಈಡೇರುವ ನಿರೀಕ್ಷೆಯಲ್ಲಿ ನೌಕರರು ಇರಬಹುದು ಎಂದೇ ಹೇಳಲಾಗುತ್ತಿದೆ. ಹೀಗಾಗಿ ಇಂದು ಹೈ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಕೂಡ ಅತೀ ಶೀಘ್ರದಲ್ಲೇ ನ್ಯಾಯಾಧೀಶರ ಮುಂದೆ ಬರಲಿದೆ ಎಂದು ವಕೀಲ ಶಿವರಾಜು ತಿಳಿಸಿದರು.
ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ಮಲತಾಯಿಯಂತೆ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಜತೆಗೆ ಕೆಲ ಸಂಘಟನೆಗಳ ಮುಖಂಡರು ವೈಯಕ್ತಿಕ ದ್ವೇಷದಿಂದ ಸರ್ಕಾರಕ್ಕೆ ಎಚ್ಚರಿಕೆ ಕೊಡದೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಟ್ಟಾರೆ ಸರ್ಕಾರ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಜಾರಿ ಮಾಡಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ನೌಕರರಿಗೆ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮತ್ತೆ ವೇತನ ಪರಿಷ್ಕರಣೆ ಆಗಬೇಕಿತ್ತು, ಅದನ್ನು ಕೂಡ ಮಾಡಿಲ್ಲ.
ಈ ಎಲ್ಲವನ್ನು ಸಾರಿಗೆ ನೌಕರರಿಗೆ ಕೊಡುವುದಕ್ಕೆ ಸರ್ಕಾರ ಈವರೆಗೂ ಮುಂದೆ ಬಂದಿಲ್ಲ. ಹೀಗಾಗಿ ನೌಕರರು ತಮ್ಮ ವೇತನ ಸೌಲಭ್ಯಪಡೆಯಲೂ ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲವನ್ನು ಗಮನಿಸಿರುವ ಶಿವರಾಜು ಅವರು ಇಂದು ನೌಕರರಿಗೆ ವೇತನ ಕೊಡಿಸಲು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related

You Might Also Like
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...
ಜಮೀರ್ ರಾಜೀನಾಮೆಗೆ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯ
ಶಿವಮೊಗ್ಗ: ವಸತಿ ಇಲಾಖೆಯಿಂದ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಶಾಸಕ ಬಿ. ಆರ್. ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ...
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ
ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...
KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ಪಾಷ ಅವರನ್ನು ಕರ್ನಾಟಕ...
ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ನಗರದಲ್ಲಿ ಇಂದು ದೇವೇಗೌಡ ಅಭಿನಂದನಾ ಸಮಿತಿ...
KSRTC ಬಸ್- ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ: 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಸಕಲೇಶಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯವಾಗಿರುವ ಘಟನೆ ತಾಲೂಕಿನ...
KSRTC ಅಧಿಕಾರಿಗಳು-ನೌಕರರಿಗೆ 7ನೇ ವೇತನ ಆಯೋಗ ಘೋಷಿಸಿ: ಸಂಸ್ಥೆಯ ನೂತನ ಎಂಡಿಗೆ ಅಧಿಕಾರಿಗಳ ಸಂಘ ಮನವಿ
ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯದ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ನೌಕರರಿಗೆ 7ನೇ ವೇತನ ಅಯೋಗವನ್ನು ಘೋಷಿಸುವಂತೆ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರನ್ನು ಕೆಎಸ್ಆರ್ಟಿಸಿ ಆಫೀರ್ಸ್ ವೆಲ್ಫೇರ್...
ಜಗತ್ತಿನ ಒತ್ತಡ ಪರಿಸ್ಥಿತಿ ನಿವಾರಣೆಗೆ ಯೋಗ ಒಂದೇ ಮಾರ್ಗ: ಪ್ರಧಾನಿ ನರೇಂದ್ರ ಮೋದಿ
ನ್ಯೂಡೆಲ್ಲಿ: ಜಗತ್ತಿನ ಅನೇಕ ಕ್ಷೇತ್ರಗಳಲ್ಲಿ ಒತ್ತಡದ ಪರಿಸ್ಥಿತಿ ಎದುರಾಗಿ ಅಶಾಂತಿ ಮತ್ತು ಅಸ್ಥಿರತೆ, ಜಾಗತಿಕ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದೆ. ಇಂತಹ ಪ್ರಕ್ಷುಬ್ದ ಪರಿಸ್ಥಿತಿ ನಿವಾರಣೆ ಆಗಬೇಕು. ಯೋಗ ಒಂದೆ...