NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನು ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ