NEWSನಮ್ಮರಾಜ್ಯರಾಜಕೀಯ

ಮೋದಿಯವರು ವಾರಕ್ಕೊಮ್ಮೆ ಬರುತ್ತಿರಲಿ: ಶಾಸಕರ ಕಾರ್ಯವೈಖರಿಗೆ ಪೃಥ್ವಿ ರೆಡ್ಡಿ ವ್ಯಂಗ್ಯ

ಎಎಪಿಯಿಂದ ʻನಮ್ಮಲ್ಲಿಗೂ ಬನ್ನಿ ಮೋದಿʼ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕರು ನಿರಂತರವಾಗಿ ಕೆಲಸ ಮಾಡುತ್ತಿರಬೇಕೆಂದರೆ ಪ್ರಧಾನಿ ನರೇಂದ್ರ ಮೋದಿಯವರು ವಾರಕ್ಕೊಮ್ಮೆ ಬರುತ್ತಿರಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಟ್ವೀಟ್‌ ಮಾಡಿದ್ದಾರೆ.

ನವೆಂಬರ್‌ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವ ಹಿನ್ನೆಲೆಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚುತ್ತಿರುವುದರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪೃಥ್ವಿ ರೆಡ್ಡಿ, “ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುತ್ತಾರೆಂದರೆ ಖುಷಿಯಾಗುತ್ತದೆ.

ಸದಾ ಗೊರಕೆ ಹೊಡೆಯುವ ಇಲ್ಲಿನ ಬಿಜೆಪಿ ಶಾಸಕರು ರಸ್ತೆಗುಂಡಿ ಮುಚ್ಚಿಸುತ್ತಾರೆ. ಸುಣ್ಣಬಣ್ಣ ಹೊಡೆಯುತ್ತಾರೆ. ನನ್ನ ಒಂದೇ ಮನವಿ ಮೋದಿಯವರೇ, ನೀವು ಆಗಾಗ ವಾರಕ್ಕೊಮ್ಮೆ ಬರುತ್ತಿರಿ. ನಿಮ್ಮ ಶಾಸಕರು ಆಗಲಾದರೂ ಕೆಲಸ ಮಾಡುತ್ತಾರೋ ನೋಡೋಣ” ಎಂದು ವ್ಯಂಗ್ಯವಾಡಿದ್ದಾರೆ.

ಎಎಪಿಯಿಂದ ʻನಮ್ಮಲ್ಲಿಗೂ ಬನ್ನಿ ಮೋದಿʼ ಅಭಿಯಾನ: ಪ್ರಧಾನಿ ನರೇಂದ್ರ ಮೋದಿಯವರು ಸಂಚರಿಸುವ ರಸ್ತೆಗಳ ಗುಂಡಿಗಳನ್ನು ಮಾತ್ರ ಬಿಬಿಎಂಪಿ ಮುಚ್ಚುತ್ತಿರುವ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಬುಧವಾರದಿಂದ “ನಮ್ಮಲ್ಲಿಗೂ ಬನ್ನಿ ಮೋದಿ” ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳಿವೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯು ಪ್ರಧಾನಿ ಮೋದಿ ಬರುತ್ತಾರೆಂದರೆ ಮಾತ್ರ ಇವುಗಳನ್ನು ಮುಚ್ಚುತ್ತದೆ. ಆದ್ದರಿಂದ ಮೋದಿಯವರು ಎಲ್ಲ ರಸ್ತೆಗಳಲ್ಲೂ ಸಂಚರಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ವಿನೂತನ ಚಳವಳಿ ಆರಂಭಿಸಿದೆ” ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ನೌಕರರ ಮೇಲೆ ತಿಪಟೂರು ಘಟಕ ವ್ಯವಸ್ಥಾಪಕರ ದರ್ಪ, ಏಕ ವಚನ ಪ್ರಯೋಗ! ವಂಚಕರ ನಂಬಿ ಹಣ ದುಪ್ಪಟ್ಟು ಆಸೆಗೆ ಬಿದ್ದ ಮಹಿಳೆ ಕೋಟಿ ರೂ. ಕಳೆದುಕೊಂಡರು!! ಮೊಮ್ಮಗನ ಹಗರಣ ತಾತನಿಗೆ ಮುಳುವಾಯಿತೇ!! ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ ಬೆನ್ನೆಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಬಿಸಿಲ ಝಳಕ್ಕೆ ಬಿಎಂಟಿಸಿ ನಿರ್ವಾಹಕ ಸೇರಿ ಇಬ್ಬರು ಮೃತ ಬೇಸಿಗೆಯ ಬಿರು ಬಿಸಿಲು- ತಂಪೆರೆದ ಭರಣಿ ಮಳೆ: ರೈತರ ಮುಖದಲ್ಲಿ ಮಂದಹಾಸ ಬೇಟಿ ಬಚಾವೋ ಬೇಟಿ ಪಢಾವೋ ಎಂದರೆ ಅತ್ಯಾಚಾರಿಗಳಿಗೆ ಟಿಕೆಟ್‌ ನೀಡುವುದೇ?:  ಮುಖ್ಯಮಂತ್ರಿ ಚಂದ್ರು ಪ್ರಶ್ನೆ ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಕ್ಷಣೆ ನೀಡಿ: ಮೋಹನ್ ದಾಸರಿ ಆಗ್ರಹ