NEWSನಮ್ಮಜಿಲ್ಲೆ

ವಿಶ್ವವ್ಯಾಪಿ ವಿಶ್ವಕರ್ಮರ ಜಯಂತಿ ಆಚರಣೆ ಮಾಡಲಿ: ಶಾಸಕ ನಿಸರ್ಗ ನಾರಾಯಣಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವಿಶ್ವಕರ್ಮರ ಜಯಂತಿ ಆಚರಣೆ ಆ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಸಮಾಜದ ಎಲ್ಲರೂ ಭಾಗವಹಿಸಿ “ವಿಶ್ವಕರ್ಮರ ಜಯಂತಿ ವಿಶ್ವವ್ಯಾಪಿ ಆಚರಣೆ ಮಾಡಲಿ” ಎಂಬುದೇ ನಮ್ಮೆಲ್ಲರ ಆಶಯ ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಹೇಳಿದರು.

ದೇವನಹಳ್ಳಿ ಟೌನ್‌‌ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಲಾದ “ವಿಶ್ವಕರ್ಮ ಜಯಂತಿ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೂ ಸಂಪ್ರದಾಯದ ಪ್ರಕಾರ ವಿಶ್ವಕರ್ಮರು ವಿಶ್ವವನ್ನೇ ರಚನೆ ಮಾಡಿದವರು. ಅವರ ಜಯಂತಿಯನ್ನು ಭಾರತೀಯರಷ್ಟೇ ಆಚರಣೆ ಮಾಡದೇ ಜಗತ್ತಿನಾದ್ಯಂತ ಆಚರಣೆ ಮಾಡಬೇಕು ಎಂದರಲ್ಲದೇ, ಸರ್ಕಾರದಿಂದಲೇ ವಿಶ್ವಕರ್ಮ ಜಯಂತಿ ಆಚರಣೆ ಮಾಡಬೇಕು ಎಂಬುದು ವಿಶ್ವಕರ್ಮ ಸಮಾಜದವರ ಬಹುದಿನದ ಬೇಡಿಕೆಯಾಗಿತ್ತು. ಸಮಾಜದವರ ಭಾವನೆಯನ್ನು ಸರ್ಕಾರ ಮನ್ನಿಸಿ ಅವರು ವಿಶ್ವಕರ್ಮ ಜಯಂತಿಯನ್ನು ಸರ್ಕಾರದಿಂದಲೇ ಆಚರಣೆ ಮಾಡುವ ಘೋಷಣೆ ಮಾಡಿದೆ ಎಂದರು.

ಜಿಲ್ಲೆಯಲ್ಲಿ ವಿಶ್ವಕರ್ಮ ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಾಣಕ್ಕೆ ಸಮಾಜದಲ್ಲಿ ಆರ್ಥಿಕವಾಗಿ ಬಲಿಷ್ಠರಾಗಿರುವವರು ಕೈ ಜೋಡಿಸಬೇಕು, ವಿಶ್ವಕರ್ಮ ಸಮುದಾಯದವರಿಗೆ ಸ್ಮಶಾನಕ್ಕೆ ಶೀಘ್ರವಾಗಿ ಸ್ಥಳಾವಕಾಶ ಕಲ್ಪಿಸಲಾಗುವುದು ಹಾಗೂ ಶಾಸಕರ ನಿಧಿಯಿಂದ ರೂ. ಐದು ಲಕ್ಷ ಅನುದಾನವನ್ನು ವಿಶ್ವಕರ್ಮ ಮಂಟಪ ನಿರ್ಮಿಸಲು ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಮಾತನಾಡಿ ವಿಶ್ವಕರ್ಮ ಸಮುದಾಯದವರು ಆಧುನಿಕತೆಯಲ್ಲಿ ತಮ್ಮ ಕುಶಲ ಕಲೆಯನ್ನು ಕಾಪಾಡಿಕೊಳ್ಳುವುದು ತುಂಬಾ ಕಷ್ಟದ ಕೆಲಸವಾಗಿದೆ. ಕಲೆಗೆ ಜಗತ್ತಿನಲ್ಲಿ ತುಂಬಾ ಬೆಲೆ ಇದೆ. ಮಾರುಕಟ್ಟೆಯ ತಂತ್ರಗಳನ್ನು ಅರಿತು ಆರ್ಥಿಕವಾಗಿ ಚೇತರಿಕೆ ಕಂಡುಕೊಳ್ಳಬೇಕಾಗಿದೆ. ಮುಂದಿನ ಪೀಳಿಗೆಗೂ ಈ ಕುಶಲ ಕಲೆ ಮುಂದುವರಿದುಕೊಂಡು ಹೋಗಬೇಕಾಗಿದೆ ಎಂದು ಹೇಳಿದರು.

ವಿಶ್ವಕರ್ಮ ಭಾವಚಿತ್ರ ಮೆರವಣಿಗೆಯು ಕಲಾ ತಂಡಗಳೊಂದಿಗೆ ಕಾಳಮ್ಮ ದೇವಾಲಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಮಾಜದ ಮುಖಂಡರಿದ್ದರು ಭಾಗವಹಿಸಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಶಿಲ್ಪ ಶಾಸ್ತ್ರಜ್ಞರಾದ ಆಚಾರ್ಯ ಟಿ. ಮೋಹನ್ ರಾವು ಶರ್ಮ ಅವರಿಂದ ವಿಶೇಷ ಉಪನ್ಯಾಸ ನೀಡಿದರು. ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಗೋಪಮ್ಮ, ದೇವನಹಳ್ಳಿ ಪುರಸಭೆ ಉಪಾಧ್ಯಕ್ಷರಾದ ಕೆ.ಗೀತಾ ಶ್ರೀಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕಿ ನಮ್ರತ.ಎನ್ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...