NEWSನಮ್ಮಜಿಲ್ಲೆ

ಯೋಗ ಜೀವನದ ಒಂದು ಭಾಗವಾಗಲಿ : ಅಪರ ಜಿಲ್ಲಾ ನ್ಯಾ.ಟಿ.ಗೋಪಾಲ ಕೃಷ್ಣ ರೈ ಕರೆ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀರಂಗಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರದ ಸಂಘದಿಂದ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ಆಚರಣೆಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಯೋಗ ಪ್ರದರ್ಶನ ಮಾಡಿ ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು.

ಈ ವೇಳೆ ಮಾತನಾಡಿದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲ ಕೃಷ್ಣ ರೈ ಅವರು, ಯೋಗವು ರೋಗವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಹೀಗಾಗಿ ಪ್ರತಿಯೊಬ್ಬರೂ ಜೀವನದ ಒಂದು ಭಾಗವಾಗಿ ಯೋಗ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಯೋಗಾಸನ ಅನ್ನೋದು ಜೂನ್ 21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿ ದಿನವೂ ನಮ್ಮೆಲ್ಲರ ಜೀವನದ ಭಾಗವಾಗಿ ಅಳವಡಿಸಿಕೊಂಡಾಗ ಯಾವುದೇ ರೋಗವೂ ನಮ್ಮ ಹತ್ತಿರ ಸುಳಿಯದು. ಅದರಂತೆ ಮನಸ್ಸು ಶುದ್ಧವಾಗಿ, ದೇಹ ಸದೃಢವಾಗಿ ಇಟ್ಟುಕೊಳ್ಳಲು ಯೋಗವೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಡಿ.ರೂಪಾ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಯೋಗಾಭ್ಯಾಸ ಅತ್ಯವಶ್ಯಕ. ಯೋಗವೂ ಒಂದು ಕ್ರೀಡೆ, ಇದರಲ್ಲೂ ಅನೇಕ ರೀತಿಯಲ್ಲಿ ಸಾಧನೆಗೈದ ಸಾಧಕರನ್ನು ಕಾಣಬಹುದು ಎಂದರು.

ಈ ವೇಳೆ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಈ ಬಾರಿಯ ಘೋಷವಾಕ್ಯದೊಂದಿಗೆ ಸಾಮೂಹಿಕವಾಗಿ ನ್ಯಾಯಾಧೀಶರು ಮತ್ತು ವಕೀಲರು ವಿವಿಧ ಯೋಗಾಸನವವನ್ನು ಮಾಡಿದರು.

ಪ್ರಧಾನ ಕಿರಿಯ ನ್ಯಾಯಾಧೀಶರಾದ ಹರೀಶ್‌ ಕುಮಾರ್‌, ಕಿರಿಯ ಸಿವಿಲ್‌ ನ್ಯಾಯಾಧೀಶರಾದ ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಡಿ.ಪವನ್‌ ಕುಮಾರ್‌ ಸೇರಿದಂತೆ ಹಲವಾರು ನಾಯವಾದಿಗಳು ಭಾಗವಹಿಸಿದ್ದರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ