Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಕಾಯಕಯೋಗಿ ಬಸವಣ್ಣನವರ ಮಾರ್ಗ ದರ್ಶನದಲ್ಲಿ ನಡೆಯೋಣ: ಸಚಿವ KHM

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣ” ನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.

12 ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಮಹಾನ್ ಚೇತನ ಬಸವಣ್ಣನವರು, ಸಾಮಾಜಿಕ ಬದ್ಧತೆ, ಎಲ್ಲರನ್ನು ಸಮಾನತೆಯಿಂದ ಕಾಣುವುದು ಅವರ ಆಶಯವಾಗಿತ್ತು. 12 ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಸಂಸದೀಯ ವ್ಯವಸ್ಥೆ ಇತ್ತು. ಬಸವಣ್ಣನವರ ಆಚಾರ ವಿಚಾರಗಳು ವಿಶ್ವದಲ್ಲಿ ಹೆಸರು ಪಡೆದಿದೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳಲ್ಲಿ ಬಸವಣ್ಣನವರ ಒಬ್ಬರು ಎಂದರು.

ದೇಶದಲ್ಲಿ ಜನರ ಮಧ್ಯೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಶಾಂತಿ ವ್ಯವಸ್ಥೆ ವೃಧ್ಧಿಸುವುದು ಬಸವಣ್ಣನವರ ವಚನಗಳಲ್ಲಿ ಕಾಣಬಹುದು. ಬಸವಣ್ಣನವರ ಹಲವು ಚಿಂತನೆಗಳು ಈಗ ಕಾನೂನುಗಳಾಗಿವೆ. ಕಾಯಕವೇ ಕೈಲಾಸ, ದಾಸೋಹ ಅವರ ಪ್ರತಿಪಾದನೆ ಯಾಗಿತ್ತು. ಬಸವಣ್ಣನವರ ಮಾರ್ಗದಲ್ಲಿ ನಡೆಯೋಣ, ಸಾಮಾಜಿಕ ಸಮಾನತೆಯಿಂದ ಬಾಳೋಣ ಎಂದು ಸಚಿವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಕೆ.ಎನ್. ಅನುರಾಧ ಮಾತನಾಡಿ, ವಚನ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುಮೋದನೆ ಆಗಿರುವ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಎಂದು ನಮೂದು ಆಗಿರುವ ಬಸವಣ್ಣನವರ ಭಾವಚಿತ್ರವನ್ನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಕರ್ನಾಟಕದ ಮೊದಲ ಮಹಾನ್ ಮಾನವತಾವಾದಿ, ಸಮಾಜವಾದಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ