NEWSಕೃಷಿನಮ್ಮಜಿಲ್ಲೆ

ಮಧ್ಯಮ ವರ್ಗದ ಆರ್ಥಿಕ ಸ್ವಾವಲಂಬನೆಗೆ ಲಘು ವಾಹನಗಳು ಸಹಕಾರಿ: ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಲಘು ವಾಹನಗಳು ಸರಕುಗಳನ್ನು ಒಂದೆಡೆಯಿಂದ ಮತ್ತೊಂದೆಡೆ ಸಾಗಣೆ ಮಾಡಲು ಮತ್ತು ರೈತರು ಹಾಗೂ ಮಧ್ಯಮ ವರ್ಗ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಗಲಿವೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಕೆ.ರಾಘವೇಂದ್ರ ಅಭಿಪ್ರಾಯಪಟ್ಟರು.

ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗ ನೂತನವಾಗಿ ವಾಹನಗಳ ಸೇಲ್ಸ್ ಅಂಡ್ ಸರ್ವಿಸಸ್ ಮಳಿಗೆ ಉದ್ಘಾಟಿಸಿ ಮಾತನಾಡಿದರು.

ಅಶೋಕ್ ಲೇಲ್ಯಾಂಡ್ ಕಂಪನಿ ಲಘು ಮತ್ತು ಬಾರಿ ವಾಹನಗಳ ತಯಾರಿಕೆಯಲ್ಲಿ ಅತ್ಯಂತ ಪ್ರಮುಖವಾಗಿದ್ದು, ಇದು ರೈತರ ಹಾಗೂ ಮಧ್ಯಮ ವರ್ಗದ ಜನರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗಿದೆ. ರೈತರು ಬೆಳೆದ ಬೆಳೆಗಳನ್ನು ಜಮೀನಿನಿಂದ ಮಾರುಕಟ್ಟೆಗೆ ಸಾಗಣೆ ಮಾಡಲು ಬೇರೆಯವರನ್ನು ಅವಲಂಬಿಸುವ ಬದಲಾಗಿ ತಾವೇ ಲಘು ಪ್ರಮಾಣದ ವಾಹನವನ್ನು ಖರೀದಿ ಮಾಡುವ ಮೂಲಕ ಸಾಗಣೆ ವೆಚ್ಚ ಮತ್ತು ತಮ್ಮ ಬೆಳೆಗಳ ಸುರಕ್ಷತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಕಂಪನಿ ಪ್ರಾಂತೀಯ ವ್ಯವಸ್ಥಾಪಕ ಪ್ರೀತಂ ಕೃಷ್ಣಮೂರ್ತಿ ಮಾತನಾಡಿ, ದೇಶದ ಅಭಿವೃದ್ಧಿಗೆ ನಮ್ಮ ಕಂಪನಿಯು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಅನೇಕ ರೀತಿಯ ಭಾರಿ ಮತ್ತು ಲಘು ವಾಹನಗಳ ತಯಾರಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಮಾಲೀಕ ಸುಬ್ರಹ್ಮಣ್ಯ ಮಾತನಾಡಿ, ಈ ವಾಹನಗಳು ಬಹಳ ವರ್ಷಗಳಿಂದಲೂ ತಮ್ಮ ಭರವಸೆ ಹಾಗೂ ದೃಢತೆಯನ್ನು ಕಾಪಾಡಿಕೊಂಡು ಬಂದಿವೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಿರಿಯಾಪಟ್ಟಣದಲ್ಲಿ ಇದರ ಶಾಖೆಯನ್ನು ತೆರೆಯಲಾಗಿದ್ದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ತಂಬಾಕು ಮಂಡಳಿ ಮಾಜಿ ಉಪಾಧ್ಯಕ್ಷ ಬಸವರಾಜಪ್ಪ, ಅಶೋಕ್ ಲೈಲ್ಯಾಂಡ್ ಶೋ ರೂಂ ಮಾಲೀಕ ವಿಟ್ಲ ಹರೀಶ್, ರೋಟರಿ ಮಿಡ್ ಟೌನ್ ಅಧ್ಯಕ್ಷ ಎಂ.ಎಂ.ರಾಜೇಗೌಡ, ತೆಲುಗಿನ ಕುಪ್ಪೆ ನಾಗಣ್ಣ ಸೇರಿದಂತೆ ಕಂಪನಿಯ ಸಿಬ್ಬಂದಿಗಳು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು