NEWSಮೈಸೂರುಸಂಸ್ಕೃತಿ

ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಏಪ್ರಿಲ್ 30 ರೊಳಗೆ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2023-24ನೇ ಸಾಲಿನ ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು 2023ನೇ ಏಪ್ರಿಲ್ 30 ರೊಳಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118, ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆಯಬೇಕು.

ಬಳಿಕ ಭರ್ತಿ ಮಾಡಿದ ಅರ್ಜಿ ಜತೆಗೆ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್.ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ.

2023ನೇ ಏಪ್ರಿಲ್ 30ರೊಳಗಾಗಿ ತಪ್ಪದೇ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ