ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ “ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ” ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಸ್ತಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಎದೆಯ ಹಣತೆ ಕೃತಿಗಾಗಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಹಾಗೂ ಕೃತಿಯ ಅನುವಾದಕಿ ದೀಪಾ ಭಸ್ತಿ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ನಾಡು ಹೆಮ್ಮೆಪಡುವ ಕ್ಷಣ ಎಂದರು.
ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಸ್ತಿ ಅವರಿಗೆ ಸರ್ಕಾರದಿಂದ ತಲಾ ₹10 ಲಕ್ಷ ಪುರಸ್ಕಾರ ನೀಡಲಾಗುವುದು. ಇದರ ಜತೆಗೆ ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೂ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ತೊಡಗಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದ ಅವರು, ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಇನ್ನು ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ಹೇಳಿದರು.
ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಇನ್ನು ಇಂಥದ್ದೊಂದು ಮೇರು ಪ್ರಶಸ್ತಿಗೆ ಭಾಜನರಾದ ಬಾನು ಅವರನ್ನು ಸನ್ಮಾನಿಸುವುದು ಕನ್ನಡಿಗನಾಗಿ ನನಗೆ ಸಂತೋಷದ ವಿಷಯ. ಇಂತಹ ಇನ್ನಷ್ಟು ಬರಹಗಳು ಅವರಿಂದ ಹೊರಬರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...