ನ್ಯೂಡೆಲ್ಲಿ: ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿ ಹೊಂದಿರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ (Supreme Court) ಸಾಂವಿಧಾನಕ ಪೀಠ ಮಹತ್ವದ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಈ ಆದೇಶ ನೀಡಿದ್ದು, ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವವರು 7,500 ಕೆಜಿಗಿಂತ ಹೆಚ್ಚಿನ ಭಾರವಿಲ್ಲದ ಸಾರಿಗೆ ವಾಹನವನ್ನು ಓಡಿಸಲು ಅರ್ಹರೇ ಎಂಬ ಕಾನೂನು ಪ್ರಶ್ನೆಗೆ ಪೀಠವು ಉತ್ತರಿಸಿದೆ.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ರಾಯ್ ಅವರೊಂದಿಗೆ ಪೀಠದಲ್ಲಿ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಕೂಡ ಇದ್ದರು.
ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ LMV ಪರವಾನಗಿ ಹೊಂದಿರುವವರು ಕಾರಣ ಎಂದು ಸಾಬೀತುಪಡಿಸಲು ಯಾವುದೇ ಡೇಟಾ ಲಭ್ಯವಿಲ್ಲ. ಈ ಸಮಸ್ಯೆಯು ಲಘು ಮೋಟಾರು ವಾಹನ ಪರವಾನಗಿ ಹೊಂದಿರುವ ಚಾಲಕರ ಜೀವನೋಪಾಯಕ್ಕೆ ಸಂಬಂಧಿಸಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.